2 ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ

prathapa thirthahalli
Prathapa thirthahalli - content producer

ಶಿವಮೊಗ್ಗ : ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ (MESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನವೆಂಬರ್ 14 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಈ ಕಾರಣದಿಂದಾಗಿ, ನವೆಂಬರ್ 14 ಮತ್ತು 15 ರಂದು ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಶಿವಮೊಗ್ಗ : ವಾಹನ ಮಾಲೀಕನಿಗೆ ಬಿತ್ತು ನೋಡಿ ಬರೋಬ್ಬರಿ 12,500 ರೂ ದಂಡ

ಕನನೀಸ ಮತ್ತು ಒಳಚರಂಡಿ ಮಂಡಳಿಯ (KUIDFC) ಸಹಾಯಕ ಕಾರ್ಯಪಾಲಕ ಅಭಿಯಂತರರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ಈ ಎರಡು ದಿನಗಳ ಅವಧಿಯಲ್ಲಿ ಮಂಡಳಿಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

Shivamogga Water Supply Cut

Share This Article