SHIVAMOGGA NEWS TODAY

ಶಿವಮೊಗ್ಗ: ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ; ಮೋದಿ-ಟ್ರಂಪ್ ಅಣಕು ಪ್ರದರ್ಶನ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga Youth Congress ಶಿವಮೊಗ್ಗ: ಅಡುಗೆ ಅನಿಲ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಇಂದು  ನಗರದ ಗೋಪಿ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿತು.

ಶಿವಮೊಗ್ಗ: ಬ್ಯಾಂಕ್​ ಡಿಟೈಲ್ಸ್​ ನೀಡ್ತಿದ್ದೀರಾ, ಹಾಗಾದ್ರೆ ನೀಮ್ಮೇಲೂ ಬಿಳ್ಬೋದು ಕೇಸ್​, ಮ್ಯೂಲ್​ ಅಕೌಂಟ್​ ಬಗ್ಗೆ ಎಸ್​, ಪಿ ಎಚ್ಚರಿಕೆ

ಕೇಂದ್ರ ಸರ್ಕಾರವು ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು 60 ರೂಪಾಯಿ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 115 ರೂಪಾಯಿ ಹೆಚ್ಚಿಸಿರುವುದನ್ನು ವಿರೋಧಿಸಿದ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಮಧ್ಯೆ ಕಟ್ಟಿಗೆ ಬಳಸಿ ಬೆಂಕಿ ಹಚ್ಚಿ ಟೀ ಮಾಡುವ ಮೂಲಕ ಅಡುಗೆ ಅನಿಲದ ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರಿಗೆ ಹೇಗೆ ತಟ್ಟುತ್ತಿದೆ ಎಂಬುದನ್ನು ಪ್ರದರ್ಶಿಸಿದರು. 

 ನಂತರ ಪ್ರತಿಭಟನೆಯಲ್ಲಿ ಮೋದಿಯವರ ಮುಖವಾಡ ಧರಿಸಿದ ವ್ಯಕ್ತಿಯ ಕೊರಳಿಗೆ ನಾಯಿಯ ಚೈನ್ ಹಾಕಿ, ಟ್ರಂಪ್ ಮುಖವಾಡ ಧರಿಸಿದ ವ್ಯಕ್ತಿ ಎಳೆದುಕೊಂಡು ಹೋಗುವ ಅಣಕು ಪ್ರದರ್ಶನ ಮಾಡಿ ಟ್ರಂಪ್ ಹೇಳಿದಂತೆ ಮೋದಿ ಕುಣಿಯುತ್ತಿದ್ದಾರೆ ಎಂಬ ವಿಡಂಬನೆಯನ್ನು ಪ್ರತಿಭಟನಾಕಾರರು ಈ ಮೂಲಕ ಬಿಂಬಿಸಿದರು. ಈ ಸಂದರ್ಭದಲ್ಲಿ  ನೂರಾರು ಕಾರ್ಯಕರ್ತರು  ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. 

ಈ ಸಂದರ್ಬದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್ ಜೆ. ಶೆಟ್ಟಿ ಮಾತನಾಡಿ ಬಿಜೆಪಿ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ಪ್ರಧಾನಿ ಮೋದಿಯವರು ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ತತ್ತರಿಸಿರುವ ಸಾಮಾನ್ಯ ಜನರು, ದಿನಗೂಲಿ ನೌಕರರು, ರೈತರು ಹಾಗೂ ಮಹಿಳೆಯರಿಗೆ ಈ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಈ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಸೂಚಿಸಬೇಕು, ಇಲ್ಲವೇ ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. 

ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ಕೇಂದ್ರದ ನಿರ್ಧಾರವನ್ನು ವಜಾಗೊಳಿಸುವಂತೆ ಒತ್ತಾಯಿಸಲಾಯಿತು.

Shivamogga Youth Congress Protests LPG Price Hike

Shivamogga Youth Congress Protests LPG Price Hike
Shivamogga Youth Congress Protests LPG Price Hike
shivamogga car decor sun control house
car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.