ಮುರುಡೇಶ್ವರದ ಹೋಂ ಸ್ಟೇಯಲ್ಲಿ ಶಿವಮೊಗ್ಗದ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ?

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ಖಾಸಗಿ ಹೋಂ ಸ್ಟೇ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೃತನನ್ನು 25 ವರ್ಷದ ವೀರೇಶ್ ಆರ್ ಎಂದು ಗುರುತಿಸಲಾಗಿದೆ.

ಶಿವಮೊಗ್ಗ: ಯುವಕರ ಭವಿಷ್ಯದ ಜೊತೆ ಬಿಜೆಪಿ ಆಟವಾಡುತ್ತಿದೆ : ಮಧು ಬಂಗಾರಪ್ಪ ವಾಗ್ದಾಳಿ 

Shivamogga ಘಟನೆ ವಿವರ

ಆಯನೂರಿನ ಕೆಇಬಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗಿಯಾಗಿದ್ದ ವೀರೇಶ್, ಕಳೆದ ನಾಲ್ಕು ದಿನಗಳ ಹಿಂದೆ  ಮಹಿಳೆಯೊಂದಿಗೆ ಮುರುಡೇಶ್ವರಕ್ಕೆ ಆಗಮಿಸಿ ಹೋಂ ಸ್ಟೇಯಲ್ಲಿ ಒಂದರಲ್ಲಿ ತಂಗಿದ್ದರು ಎನ್ನಲಾಗಿದೆ. ಜುಲೈ 28ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ಬೆಡ್‌ಶೀಟ್ ಕವರ್ ಬಳಸಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವೀರೇಶ್‌ ಅವರ ಮೃತದೇಹ ಪತ್ತೆಯಾಗಿದೆ. 

ಆದರೆ, ಈ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಮೃತನ ತಂದೆ ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ, ತಮ್ಮ ಮಗ ಯಾವ ಕಾರಣಕ್ಕೆ ಮತ್ತು ಯಾವ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದರ ಬಗ್ಗೆ ನಮಗೆ ಅನುಮಾನ ಇದೆ  ಎಂದು ತಿಳಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೃತನ ತಂದೆ ಪೊಲೀಸರಲ್ಲಿ ಮನವಿ ಮಾಡಿದ್ದು,  ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor