ಹೋರಿ ಹಬ್ಬದ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್/ ಹೋರಿ ಓಟಕ್ಕೆ ಜಿಲ್ಲಾಡಳಿತದ ಕಂಡೀಷನ್/ ಏನದು? ವಿವರ ಇಲ್ಲಿದೆ ಓದಿ
ಎತ್ತಿನ ಓಟ/ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಆಯೋಜಕರು ಕ್ರೀಡೆಗೆ ಮುನ್ನ ಸ್ಥಳೀಯ ವ್ಯಾಪ್ತಿಯ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ಎತ್ತಿನ ಓಟ/ಎತ್ತಿನ ಗಾಡಿ ಓಟ ಕ್ರೀಡೆಯ ಮಾರ್ಗಸೂಚಿ ಕುರಿತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ವೇಳೆ ಹೋರಿ ಓಟಕ್ಕೆ ಸಂಬಂಧಿಸಿದಂತೆ ಕೆಲವು ಷರತ್ತುಗಳನ್ನು ಸೂಚಿಸಿದರು. … Read more