KARNATAKA NEWS/ ONLINE / Malenadu today/ Aug 30, 2023 SHIVAMOGGA NEWS
ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಪೊಲೀಸರು ಎರಿಯಾ ಡಾಮಿನೇಷನ್ ಗಸ್ತನ್ನ ಇನ್ನಷ್ಟು ತೀವ್ರಗೊಳಿಸಿದ್ದಾರೆ. ಇದಕ್ಕೆ ಪೂರಕವಾಗಿ ಮೊನ್ನೆಯಷ್ಟೆ 66 ಮಂದಿ ವಿರುದ್ಧ ಪಿಟ್ಟಿ ಕೇಸ್ ದಾಖಲಿಸಿದ್ದರು. ಇದೀಗ ಒಂದೇ ರಾತ್ರಿಯಲ್ಲಿ ಬರೋಬ್ಬರಿ 108 ಕೇಸ್ಗಳನ್ನು ದಾಖಲಿಸಿದ್ದಾರೆ.
ದಿನಾಂಕ: 29-08-2023 ರಂದು ಸಂಜೆ ಶಿವಮೊಗ್ಗ-ಎ, ಶಿವಮೊಗ್ಗ-ಬಿ ಮತ್ತು ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು / ಪೋಲಿಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡವು ಆಯಾ ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ Area Domination ವಿಶೇಷ ಗಸ್ತು ಮಾಡಿತ್ತು.
ಈ ವೇಳೆ Public Nuisance ಮಾಡುವ ಮತ್ತು ಅನುಮಾನಸ್ಪಾದ ವ್ಯಕ್ತಿಗಳನ್ನು ಠಾಣೆಗೆ ಕರೆತಂದು, ಅವರುಗಳ ಪೂರ್ವಾಪರಗಳನ್ನು ಪರಿಶೀಲಿಸಿ, Public Nuisance ಮಾಡಿದ ವ್ಯಕ್ತಿಗಳ ವಿರುದ್ದ ಒಟ್ಟು 96 ಲಘು ಪ್ರಕರಣಗಳನ್ನ ದಾಖಲಿಸಲಾಗಿದೆ.
ಅಲ್ಲದೆ 09 COTPA ಕಾಯ್ದೆ ಪ್ರಕರಣಗಳನ್ನು ದಾಖಲಿಸಲಾಗಿದೆ ಹಾಗೂ ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ 03 ವ್ಯಕ್ತಿಗಳ ವಿರುದ್ಧ NDPS ಕಾಯ್ದೆ ಅಡಿಯಲ್ಲಿ 03 ಪ್ರಕರಣಗಳನ್ನು ದಾಖಲಿಸಲಾಗಿದೆ.
ಇನ್ನಷ್ಟು ಸುದ್ದಿಗಳು
ಗುದ್ದಲಿ ಪೂಜೆಗೆಂದು ವಡ್ನಾಳ್ಗೆ ಹೋಗಿ ಮನೆಗೆ ವಾಪಸ್ ಬಂದಾಗ ಮಾಲೀಕರಿಗೆ ಎದುರಾಗಿತ್ತು ಶಾಕ್!
JOB NEWS / ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ