ಗೀತಾ ಶಿವರಾಜಕುಮಾರ್‌ ಸೋಲು | ಶಿವಮೊಗ್ಗದ ಮತದಾರನನ್ನ ನೆನೆದ ಶಿವರಾಜಕುಮಾರ್‌ !

Geetha Shivarajkumar's defeat in the Shivamogga Lok Sabha constituency, actor Shivarajkumar expressed his gratitude to the fans and the people of the constituency. 

ಗೀತಾ ಶಿವರಾಜಕುಮಾರ್‌ ಸೋಲು | ಶಿವಮೊಗ್ಗದ ಮತದಾರನನ್ನ ನೆನೆದ ಶಿವರಾಜಕುಮಾರ್‌ !
Geetha Shivarajkumar, Shivamogga Lok Sabha constituency, Shivarajkumar

SHIVAMOGGA | MALENADUTODAY NEWS | Jun 5, 2024  ಮಲೆನಾಡು ಟುಡೆʼ 

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್‌ಗೆ ಸೋಲಾಗಿದೆ. ಇದರ ಬೆನ್ನಲ್ಲೆ ನಟ ಶಿವರಾಜಕುಮಾರ್‌ ಅಭಿಮಾನಿಗಳು ಹಾಗೂ ಕ್ಷೇತ್ರದ ಜನರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್‌ ಮೀಡಿಯಾ ಅಕೌಂಟ್‌ನಲ್ಲಿ ಪೋಸ್ಟ್‌ವೊಂದನ್ನ ಹಾಕಿಕೊಂಡಿರುವ ಅವರು ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಮತದಾರರಿಗೆ ಧನ್ಯವಾದ ಹೇಳಿದ್ದಾರೆ. 

ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ @INCKarnataka   ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಧನ್ಯವಾದಗಳು

ಶಿವಣ್ಣ ಪೋಸ್ಟ್‌ ನಲ್ಲಿ ಏನಿದೆ? 

ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು.

Following Geetha Shivarajkumar's defeat in the Shivamogga Lok Sabha constituency, actor Shivarajkumar expressed his gratitude to the fans and the people of the constituency.