shooting of Kantara 1
Shivamogga news / ತೀರ್ಥಹಳ್ಳಿ, ಜೂನ್ 12, 2025: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾಂತಾರ 1 ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ನಡುವ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆಗುಂಬೆಯಲ್ಲಿನ ಹೋಮ್ ಸ್ಟೇವೊಂದರಲ್ಲಿ ಇವರು ತಂಗಿದ್ದರು. ಅವರಿಗೆ ತೀವ್ರ ಎದೆನೋವು ಕಾಣಿಸಿದ್ದರ ಹಿನ್ನೆಲೆಯಲ್ಲಿ, ಅವರನ್ನು ಗುಡ್ಡೆಕೇರಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿದೆ.
ಕಾಂತಾರ ಚಲನಚಿತ್ರದ ಚಿತ್ರೀಕರಣಕ್ಕಾಗಿ ತಂಗಿದ್ದ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ನಿಜು ವಿ.ಕೆ. ಆಗುಂಬೆಯ ಹೋಂಸ್ಟೇ ಒಂದರಲ್ಲಿ ವಾಸ್ತವ್ಯ ಹೂಡಿದ್ದರು. ಇನ್ನ ಈ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ