short circuit ಜುಲೈ 1 ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ : ತಪ್ಪಿತು ಭಾರೀ ಅನಾಹುತ
ಶಿವಮೊಗ್ಗ : ಶಿವಮೊಗ್ಗ ನಗರದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ರಾಮಣ್ಣ ಎಂಬುವವರಿಗೆ ಸೇರಿದ ಈ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಕೂಡಲೇ ಇಡೀ ಕಾಂಪ್ಲೆಕ್ಸ್ ಹೊಗೆಯಿಂದ ಆವರಿಸಿಕೊಂಡಿತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಮೆಸ್ಕಾಂ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.
ಮಾಹಿತಿ ತಲುಪುತ್ತಿದ್ದಂತೆಯೇ ಮೆಸ್ಕಾಂ ಸಿಬ್ಬಂದಿ ಕೂಡಲೇ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದರು. ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಈ ಬೆಂಕಿ ಅವಘಡದಿಂದಾಗಿ ಓ.ಟಿ. ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಘಟನೆಯಲ್ಲಿ ವಸ್ತುಗಳಿಗೆ ಹಾನಿಯಾಗಿದೆಯೇ ಎಂಬುವುದರ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ.
