Short circuit : ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅಷ್ಟರಾಗಲೇ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಮತ್ತು ಹೊಸ ಮನೆ ನಿರ್ಮಾಣಕ್ಕೆ ತಂದಿಟ್ಟಿದ್ದ ಸುಮಾರು ₹2 ಲಕ್ಷಕ್ಕೂ ಅಧಿಕ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ.