ಸೊರಬ ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ ಆರಂಭ | ಸಚಿವ ಮಧು ಬಂಗಾರಪ್ಪ ಚಾಲನೆ

Malenadu Today

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS

ಶಿವಮೊಗ್ಗ  ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ ಆರಂಭಗೊಂಡಿದೆ. 

ದಸರಾ ಆಚರಣಾ ಸಮಿತಿ, ಕನ್ನಡ ಸಂಸ್ಕೃತಿ ಇಲಾಖೆ ಶಿವಮೊಗ್ಗ, ಗ್ರಾಮ ಪಂಚಾಯತ್ ಚಂದ್ರಗುತ್ತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೊರಬ ತಾಲೂಕಿನ ಚಂದ್ರುಗುತ್ತಿಯಲ್ಲಿ 8ನೇ ವರ್ಷದ ಶ್ರಿ ರೇಣುಕಾಂಬಾ ದೇವಿ ದಸರಾ ಉತ್ಸವ -2023 ಹಮ್ಮಿಕೊಳ್ಳಲಾಗಿದೆ. 

ಈ ಉತ್ಸವಕ್ಕೆ  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಸಿಗಂಧೂರು ಚೌಡೇಶ್ವರಿ ದೇವಸ್ಥಾನ ಧರ್ಮದರ್ಶಿಗಳಾದ ರಾಮಪ್ಪ, ಸೊರಬ ತಾ.ಪಂ ಮಾಜಿ ಅಧ್ಯಕ್ಷರಾದ ಹೆಚ್ ಗಣಪತಿ, ಚಂದ್ರಗುತ್ತಿ ಗ್ರಾ.ಪಂ ಅಧ್ಯಕ್ಷರಾದ ಸರಿತಾ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

Share This Article