ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ತೀರ್ಥಹಳ್ಳಿಯ ವಿದ್ಯಾರ್ಥಿನಿಯೊಬ್ಬರು, ನೆರೆಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶೃಂಗೇರಿ ತಾಲ್ಲೂಕಿನಲ್ಲಿ ಹೃದಯಾಘಾತದಿಂದಾಗಿ 22 ವರ್ಷದ ವಿದ್ಯಾರ್ಥಿನಿ ದಿಶಾ ಮೃತಪಟ್ಟಿದ್ದಾರೆ. ಇಲ್ಲಿನ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ಇದ್ದ ಇವರು ಶೃಂಗೇರಿ ಪೇಟೆಯಲ್ಲಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಹಾಸ್ಟೆಲ್‌ನಲ್ಲಿರುವಾಗಲೇ ದಿಶಾರಿಗೆ ಹಠಾತ್ತನೆ ಎದೆನೋವು ಕಾಣಿಸಿಕೊಂಡಿದೆ.

ಪರಿಣಾಮ ಅವರು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸಹಪಾಠಿಗಳು ಸಹಾಯಕ್ಕೆ ಧಾವಿಸಿದ್ದರೂ, ಅದಾಗಲೇ ದಿಶಾ ಅವರು ಕೊನೆಯುಸಿರೆಳೆದಿದ್ದರು. ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,






