POWER CUT TODAY

ಶಿವಮೊಗ್ಗದಲ್ಲಿ ಇವತ್ತು ದಿನವಿಡಿ ಕರೆಂಟ್ ಇರಲ್ಲ! ಜೂನ್ 06ಕ್ಕೆ 40 ಕ್ಕೂ ಹೆಚ್ಚು ಕಡೆಗಳಲ್ಲಿ ಪವರ್ ಕಟ್

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ / ಇ ವತ್ತು ಶಿವಮೊಗ್ಗದಲ್ಲಿ ಸುಮಾರು ಕಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯೊಂದನ್ನು ಹೊರಡಿಸಿದೆ. ಬೆಳಗ್ಗೆ 6 ಗಂಟೆಯಿಂದಲೇ ಪವರ್ ಕಟ್ ಆಗುತ್ತೆ ಎಂದು ಮೆಸ್ಕಾಂ ಹೇಳಿದೆ. ತುರ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯವಾಗುವ ಬಗ್ಗೆ ಮಾಹಿತಿ ನೀಡಿದೆ.

ಇವತ್ತು ದಿನವಿಡಿ ಕರೆಂಟ್ ಇರಲ್ಲ!

ಶಿವಮೊಗ್ಗ ನಗರ ಉಪವಿಭಾಗ-2 ರ ಘಟಕ-5 ರ ವ್ಯಾಪ್ತಿಗೆ ಬರುವ ಬಿ.ಹೆಚ್. ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದಾಗಿ ಜೂನ್ 03 ರಂದು ಬೆಳಗ್ಗೆ 6.00 ರಿಂದ 10.00 ಗಂಟೆಯವರೆಗೆ ನಗರದ ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್. ರಸ್ತೆ, ಎನ್.ಟಿ. ರಸ್ತೆ, ಜೆ.ಸಿ. ನಗರ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಜೂನ್ 06ಕ್ಕೆ 40 ಕ್ಕೂ ಹೆಚ್ಚು ಕಡೆಗಳಲ್ಲಿ ಪವರ್ ಕಟ್

ಇದರ ಜೊತೆಗೆ ಮೆಸ್ಕಾಂ ವ್ಯಾಪ್ತಿಯ ಶಿವಮೊಗ್ಗದ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 06 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಎಫ್-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್-8 ಜಾವಳ್ಳಿ ಐ.ಪಿ ಮಾರ್ಗಗಳಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ.

ಪ್ರಮುಖವಾಗಿ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೇನವಳ್ಳಿ, ಹಾರೋಬೇನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ. ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ. ಕ್ಯಾಂಪ್, ಚಿಕ್ಕಮರಡಿ ಮತ್ತು ಅದರ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂ ಜೊತೆ ಸಹಕರಿಸಬೇಕಾಗಿ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ