Sigandur bridge inauguration place july 10 : ಸಿಂಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ ಎಲ್ಲಿ ನಡೆಯಲಿದೆ ಗೊತ್ತಾ..?
ಸಾಗರ: ತಾಲೂಕು ಕೇಂದ್ರದಲ್ಲಿ ಜುಲೈ 14ರಂದು ನಡೆಯಲಿರುವ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ (ಸಿಗಂದೂರು ಸೇತುವೆ ) ಲೋಕಾರ್ಪಣೆ ಸಮಾರಂಭದ ಸಭಾ ಕಾರ್ಯಕ್ರಮಕ್ಕೆ ಸ್ಥಳ ನಿಗದಿಪಡಿಸಲಾಗಿದೆ.
Sigandur bridge inauguration place ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಪಟ್ಟಣದ ಬುಧವಾರ (ಜುಲೈ 9) ದಂದು ಶಿವಮೊಗ್ಗದ ನೆಹರೂ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆಗಮಿಸಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅಭಿಯಂತ ಪೀರ್ ಪಾಷಾ, ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಪ್ರಸನ್ನ ಕೆರೆಕೈ, ನಗರ ಅಧ್ಯಕ್ಷ ಗಣೇಶ ಪ್ರಸಾದ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾಜಶೇಖರ ಗಾಳಿಪುರ, ಎಚ್.ಎಸ್. ರಮೇಶ್, ಅರುಣ ಕುಗ್ವೆ, ಬಿ.ಟಿ. ರವೀಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Karnataka’s longest inland cable-stayed bridge – a massive 2.25 km extradosed balanced cantilever structure with 740m of cable.