ಸಿಗಂದೂರು ಭಕ್ತರಿಗೂ ಸಿಗದು ಲಾಂಚ್?! ಬಂದ್ ಆಗುತ್ತಾ ಹೊಳೆಬಾಗಿಲು ಕಡವು ಸೇವೆ

Sikandur devotees will also not get the launch?! Will the holebagilu lounge service be shut down without water?

ಸಿಗಂದೂರು ಭಕ್ತರಿಗೂ ಸಿಗದು ಲಾಂಚ್?! ಬಂದ್ ಆಗುತ್ತಾ ಹೊಳೆಬಾಗಿಲು ಕಡವು ಸೇವೆ

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS

ಸಾಗರ/  ಶರಾವತಿ ಹಿನ್ನೀರಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಮುಂಗಾರು ಆರಂಭವೂ ಸಹ ತಡವಾಗುತ್ತಿದ್ದು, ಮುಂಗಾರು ಪೂರ್ವ ಮಳೆಯು ಮಲೆನಾಡಿನಲ್ಲಿ ಸಮರ್ಪಕವಾಗಿ ಆಗಿಲ್ಲ.ಪರಿಣಾಮ ಶರಾವತಿ ಹಿನ್ನೀರಿನಲ್ಲಿ ಓಡಾಡುವ ಎರಡು  ಲಾಂಚ್​ಗಳ ಸಂಚಾರ ಈಗಾಗಲೇ ಸ್ಥಗಿತಗೊಂಡಿದ್ದು, ಸಿಗಂದೂರು ಲಾಂಚ್​  ಸಹ ಕಾರ್ಯ ನಿಲ್ಲಿಸುವ ಸಾಧ್ಯತೆ ಇದೆಯಂತೆ. ಪರಿಣಾಮ ಸ್ಥಳೀಯರಿಗೆ ಹಾಗೂ ಸಿಗಂದೂರು ಚೌಡೇಶ್ವರಿ (sigandur chowdeshwari)ದರ್ಶನಕ್ಕೆ  ಬರುವ  ಪ್ರವಾಸಿಗರಿಗೆ ತೊಂದರೆಯಾಗುವ ಸಾಧ್ಯತೆ ಇದೆ. .

ಅತ್ತ ಲಿಂಗನಮಕ್ಕಿ ಅಣೆಕಟ್ಟೆ ಬರಿದಾಗಿದೆ. ಈ ಹಿನ್ನೆಲೆಯಲ್ಲಿ  ಸಾಗರ ತಾಲ್ಲೂಕಿನ ಮುಪ್ಪಾನೆಯಲ್ಲಿ ಲಾಂಚ್ ಸೇವೆ ಕಳೇದ ಮೇ 26ರಿಂದಲೇ ನಿಂತಿದೆ. ಇನ್ನೂ ಹೊಸನಗರ ತಾಲ್ಲೂಕಿನ ಹಸಿರುಮಕ್ಕಿ ಲಾಂಚ್ ಸಹ ಕಳೆದ  ಜೂನ್ 4ರಿಂದ ಸ್ಥಗಿತವಾಗಿದೆ. ಇದೀಗ ಸಿಗಂದೂರು ಲಾಂಚ್ ನಿಂತ ಪಕ್ಷದಲ್ಲಿ ಸಾಕಷ್ಟು ಸಮಸ್ಯೆಯಾಗಲಿದೆ.  

ಲಾಂಚ್ ನಿಲ್ಲಿಸುವ ಹೊಳೆಬಾಗಿಲು, ಆಂಬಾರಗೋಡ್ಲು ನಲ್ಲಿ ಬೇಸ್ಮೆಂಟ್​ ನಿಂದ ಮುಂದಕ್ಕೆ ಲಾಂಚ್​ ನಿಲ್ಲಿಸಬೇಕಾದ ಅನಿವಾರ್ಯತೆ ಇದ್ದು, ಅಷ್ಟರಮಟ್ಟಿಗೆ ನೀರು ಇಳಿದಿದೆ. ಇದು ಲಾಂಚ್ ನಿಲುಗಡೆಗೆ ಸಮಸ್ಯೆಯಾಗುತ್ತಿದೆ.

ಹಾಗೊಂದು ವೇಳೆ ಇಲ್ಲಿ ಕಾರ್ಯಾಚರಣೆ ನಿಂತರೆ, ಜನರು ಸಂಪೇಕಟ್ಟೆ, ನಿಟ್ಟೂರು ಮೂಲಕ ಸಿಗಂದೂರಿಗೆ (sigandur chowdeshwari distance) ಬರಬೇಕಾಗುತ್ತದೆ. ಅಲ್ಲದೆ ಈ ಭಾಗದ ಜನರು ಸಹ ಸುತ್ತಿಬಳಸಿಯೆ ಸಾಗರಕ್ಕೆ ಬರಬೇಕಾಗುತ್ತದೆ. ಈ ತಲೆಬಿಸಿಯನ್ನು ತಪ್ಪಿಸಲು ಮಳೆಯ ಆಗಮನವಷ್ಟೆ ಪರಿಹಾರವಾಗಿದೆ. 

ಆಯನೂರು ಬಾರ್ ಕ್ಯಾಶಿಯರ್ ಕೊಲೆ ಪ್ರಕರಣ/ ಆರೋಪಿ ಕಾಲಿಗೆ ಗುಂಡು! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

ಶಿವಮೊಗ್ಗ/ ಆಯನೂರಲ್ಲಿ ಬಾರ್ ಕ್ಯಾಶಿಯರ್​ ಕೊಲೆ ಪ್ರಕರಣ ಸಂಬಂಧ ಕುಂಸಿ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ನಿರಂಜನ, ಅಶೋಕ್​ ಹಾಗೂ ಸತೀಶ್ ಬಂಧಿತರು .  ಈ ಪೈಕಿ ಇಬ್ಬರನ್ನು ಮೊದಲೇ ಬಂಧಿಸಿದ್ದ ಪೊಲೀಸರು, ಸತೀಶ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಎಸ್​ಐ ರಾಜುರೆಡ್ಡಿಯವರು ಆರೋಪಿ ಕಾಲಿಗೆ ಗುಂಡು ಹೊಡೆದು ಆತನನ್ನ ಬಂಧಿಸಿದ್ದಾರೆ.

ಹಳೇ ಕಿರಿಕ್​! ಆಯನೂರಿನಲ್ಲಿ ನಿನ್ನೆ ರಾತ್ರಿ, ಬಾರ್ ಕ್ಯಾಶಿಯರ್​ಗೆ ಚುಚ್ಚಿ​ ಕೊಲೆ! ಪೊಲೀಸರೇ ಸಾಕ್ಷಿಯಾದರಾ ಭೀಕರ ಘಟನೆಗೆ?

ನಿನ್ನೆ ಮಧ್ಯರಾತ್ರಿ ನಡೆದಿದ್ದ ಕೊಲೆ ಸಂಬಂಧ ಆರೋಪಿ ಸತೀಶ್​ನನ್ನ ಬಂಧಿಸಲು ಪಿಎಸ್​ಐ ರಾಜುರೆಡ್ಡಿ ಹಾಗೂ ಪ್ರವೀಣ್ ಹಾಗೂ ಶಿವರಾಜ್​ ಎಂಬಿಬ್ಬರು ಸಿಬ್ಬಂದಿ ತೆರಳಿದ್ದರು. ಈ ವೇಳೆ ಆರೋಪಿ ಸತೀಶ್​ ಪೊಲೀಸರ ಮೇಲೆ ಚಾಕುವಿನಿಂದ ಅಟ್ಯಾಕ್ ಮಾಡಲು ಪ್ರಯತ್ನಿಸಿದ್ದಾನೆ. ಎಚ್ಚರಿಕೆ ನೀಡಿ ಗಾಳಿಯಲ್ಲಿ ಗುಂಡು ಹೊಡೆದ ಹೊರತಾಗಿಯು ಸತೀಶ್ ದಾಳಿಗೆ ಮುಂದಾದಾಗ ಪಿಎಸ್​ಐ ರವರು ಆತನ ಕಾಲಿಗೆ ಗುಂಡು ಹಾರಿಸಿದ್ಧಾರೆ. ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನ ಹಾಗೂ ಆರೋಪಿ ಸತೀಶ್​ನನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.