ಶಿವಮೊಗ್ಗ: ಹಕ್ಕುಪತ್ರ ಮತ್ತು ಇ-ಸ್ವತ್ತುಗಳಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ 15 ದಿನ ಗಡುವು…

ಶಿವಮೊಗ್ಗ : ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ : ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ ನೀಡುವ ಮೂಲಕ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

Slum Free Mission Minister Sets 15 Day Deadline
Slum Free Mission Minister Sets 15 Day Deadline

ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್​ ಆಫ್! ಸಿಗದ ಮಾಹಿತಿ

ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸುವಂತೆ ಡಿಯುಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇನ್ನು 15 ದಿನಗಳ ಒಳಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ಲಂ ಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಜಿಲ್ಲೆಯನ್ನು ಕೊಳಚೆ ಪ್ರದೇಶಮುಕ್ತ ಜಿಲ್ಲೆಯನ್ನಾಗಿ ಮಾಡುವ ಮೂಲಕ ಮಾದರಿ ಜಿಲ್ಲೆಯಾಗಿಸಲು ಎಲ್ಲರೂ ಸಹಕರಿಸಬೇಕು ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಜಿ.ಪಂ ಸಿಇಓ ಹೇಮಂತ್ ಎನ್, ಸಿಸಿಎಫ್ ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಮಾಜಿ ವಿಧಾನ ಪರಿಷತ್ ಶಾಸಕರಾದ ಪ್ರಸನ್ನಕುಮಾರ್, ಕೃಷಿ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಎಸಿ ಸತ್ಯನಾರಾಯಣ, ಡಿಯುಡಿಸಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಸ್ಲಂ ಬೋರ್ಡ್ ಅಧಿಕಾರಿಗಳು, ಡಿಡಿಪಿಐ, ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Slum Free Mission Minister Sets 15 Day Deadline

Slum Free Mission Minister Sets 15 Day Deadline
Slum Free Mission Minister Sets 15 Day Deadline

 

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು