sn channabasappa : ತುಂಗಾ ಹಳೇ ಸೇತುವೆ ಜಾಗದಲ್ಲಿ ನಿರ್ಮಾಣವಾಗುತ್ತಾ ನೂತನ ಸೇತುವೆ | ಶಾಸಕರಿಂದ ಮಹತ್ವದ ಹೆಜ್ಜೆ
ಶಿವಮೊಗ್ಗ, ನಗರದ ತುಂಗಾ ನದಿಗೆ ನೂತನ ಸೇತುವೆ ನಿರ್ಮಿಸಲು ಅನುದಾನ ನೀಡುವ ಕುರಿತಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ
ಈ ಸಂದರ್ಭದಲ್ಲಿ, ಲೋಕೋಪಯೋಗಿ ಇಲಾಖೆ ವತಿಯಿಂದ ಈಗಾಗಲೇ ಸಿದ್ಧಪಡಿಸಲಾದ ನೂತನ ಸೇತುವೆಯ ಪ್ಲಾನ್ ಮತ್ತು ಅಂದಾಜು ಪಟ್ಟಿಯನ್ನು ಸಚಿವರಿಗೆ ಹಸ್ತಾಂತರಿಸಲಾಯಿತು. ಹಾಗೆಯೇ ಸಾರ್ವಜನಿಕ ಸುರಕ್ಷತೆ ಮತ್ತು ನಿರಂತರ ಸಾರಿಗೆ ವ್ಯವಸ್ಥೆಗಾಗಿ ಹಳೇ ಸೇತುವೆ ಸ್ಥಳದಲ್ಲಿ ಹೊಸ ಸೇತುವೆ ನಿರ್ಮಾಣದ ಅಗತ್ಯವಿದೆ. ಈ ಹೊಸ ಸೇತುವೆಯ ನಿರ್ಮಾಣಕ್ಕೆ 33 ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದ್ದು, ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡಿ ಎಂದು ಮನವಿ ಸಲ್ಲಿಸಿದರು.