ಕಳಂಕಿತರಿಗೆ ಮತ್ತೆ ಮಂತ್ರಿಗಿರಿ, ಇದು ಹೆಣದ ಮೇಲೆ ನಡೆಸುತ್ತಿರುವ ಅಧಿಕಾರ ,ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಬಸಪ್ಪ ಆಕ್ರೋಶ

ಹಂಚಿಕೊಳ್ಳಿ
WhatsApp Facebook X Telegram
SN Channabasappa Slams Congress
SN Channabasappa Slams Congress

SN Channabasappa ಶಿವಮೊಗ್ಗ: ರಾಜ್ಯ ಸರ್ಕಾರ ನಡೆಸಿರುವ ಸಚಿವ ಸಂಪುಟ ವಿಸ್ತರಣೆ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪುನರಾಯ್ಕೆಯನ್ನು ಖಂಡಿಸಿ ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ :  ಗುಡ್ಡೇಕಲ್​​  ಜಾತ್ರೆಗೆ ಡೇಟ್​ ಫಿಕ್ಸ್​​ : ಯಾವಾಗ ?

ಇಂದು ನಗರದಲ್ಲಿ ಮಾತನಾಡಿದ ಅವರು  ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದಾಗಿ ಶಿವಮೊಗ್ಗದ ಸರ್ಕಾರಿ ನೌಕರ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು. ಆ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಅಕ್ಷಮ್ಯ ಅಪರಾಧ. ಚಂದ್ರಶೇಖರ್ ಅವರ ಕುಟುಂಬ ಬೀದಿಗೆ ಬಂದಿದ್ದರೂ, ಕಾಂಗ್ರೆಸ್ ಸರ್ಕಾರ ಹೆಣದ ಮೇಲೆ ಅಧಿಕಾರ ನಡೆಸಲು ಹೊರಟಿದೆ ಎಂದು ಚನ್ನಬಸಪ್ಪ ಕಿಡಿಕಾರಿದ್ದಾರೆ.

ಸಚಿವ ಸ್ಥಾನ ಸಿಗದೆ ರಾಜೀನಾಮೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಶಾಸಕರ ನಡೆಗೆ ಪ್ರತಿಕ್ರಿಯಿಸಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವ ತಾಕತ್ತು ಕಾಂಗ್ರೆಸ್‌ನ ಯಾವ ಶಾಸಕರಿಗೂ ಇಲ್ಲ. ಹೀಗಾಗಿ ಅವರ ಹೇಳಿಕೆಗಳೆಲ್ಲವೂ ಬರಿ ಸಾಂದರ್ಭಿಕ ನಾಟಕವಷ್ಟೇ ಎಂದು ಲೇವಡಿ ಮಾಡಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor