ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 28, 2025, ಶಿವಮೊಗ್ಗ ನಗರದ ಆಟೋ ಚಾಲಕರ ವಿರುದ್ಧ ವಿಮಾನ ನಿಲ್ದಾಣಕ ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣದಲ್ಲಿ ಆಟೋ ಚಾಲಕರು ಬಾಡಿಗೆ ಮಾಡಿಕೊಂಡು ಓಡಾಡುತ್ತಿದ್ದಾರೆ.ಈ ಮೂಲಕ ಕಾನೂನು ಉಲ್ಲಂಘನೆ ಮಾಡುತ್ತಿದ್ದು ಆಟೋಗಳಿಗೆ ಕಡಿವಾಣ ಹಾಕುವಂತೆ ಸೋಗಾನೆ ವಿಮಾನ ನಿಲ್ದಾಣ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಸಿ, ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ ಸೋಮವಾರ ಮನವಿ ಪತ್ರ ಸಲ್ಲಿಕೆ ಮಾಡಿದರು.

Sogane Airport Taxi Owners
ಮಂಗಳಕರ! ಇವತ್ತಿನ ರಾಶಿಫಲ! ದಿನಭವಿಷ್ಯದ ವಿಶೇಷ ಓದಿ
ಆಟೋ ಚಾಲಕರು ವಿಮಾನ ನಿಲ್ದಾಣದ ಒಳಗಡೆ ಬಂದು ಅನುಮತಿ ಇಲ್ಲದ್ದಿರೂ ಬಾಡಿಗೆ ಮಾಡುತ್ತಿದ್ದಾರೆ. ಬಸ್ ನಿಲ್ದಾಣದಿಂದ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬಾಡಿಗೆ ಮಾಡಲು ಆಟೋ ಚಾಲಕರಿಗೆ ಅನುಮತಿ ಇದೆ.
ಆದರೆ, ವಿಮಾನ ನಿಲ್ದಾಣ 14.50 ಕಿಲೋ ಮೀಟರ್ ದೂರದಲ್ಲಿ ಇದ್ದು, ಪ್ರತಿನಿತ್ಯ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ.
ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು : ಇ-ಪೇಪರ್ ಓದಿ
ಆಪ್ಗಳನ್ನೂ ಬಳಕೆ ಮಾಡಿಕೊಂಡು ಆಟೋ ಓಡಿಸುತ್ತಿದ್ದಾರೆ.. ಇದರಿಂದಾಗಿ ನೋಂದಣಿ ಮಾಡಿಕೊಂಡಿರುವ ಏರ್ ಪೋರ್ಟ್ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರಿಗೆ ತೊಂದರೆಯಾಗುತ್ತಿದೆ. ಆಟೋ ಚಾಲಕರು ವಿಮಾನ ನಿಲ್ದಾಣದಕ್ಕೆ ಬರುವುದನ್ನು ತಪ್ಪಿಸಬೇಕು, ಸಾರಿಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಬಗ್ಗೆ ಹಿಂದೆಯೂ ಆರ್ಟಿಒ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ ಮಾಡಲಾಗಿದೆ. ಆದರೆ, ಇದುವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಕೂಡಲೇ ಮನವಿಯನ್ನು ಪರಿಗಣಿಸಿ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಸೋಗಾನೆ ವಿಮಾನ ನಿಲ್ದಾಣ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದಿಂದ ಉಗ್ರ ಹೋರಾಟದ ಎಚ್ಚರಿಕೆಯನ್ನು ಈ ಸಂದರ್ಭದಲ್ಲಿ ನೀಡಲಾಯಿತು. ಎಂ.ಎಸ್. ಭವಿತ್, ಶಿವಕುಮಾರ್, ಪುರಂದರ್ ಸೇರಿದಂತೆ ಇತರರಿದರು.
Sogane Airport Taxi Owners
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
