ಜೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಖೈದಿಯ ಶವ ಪತ್ತೆ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

Sogane jail Shivamogga 

ಶಿವಮೊಗ್ಗ: ವಿಚಾರಣಾಧೀನ ಕೈದಿಯೊಬ್ಬರ ಶವವು ಶಿವಮೊಗ್ಗದ ಸೋಗಾನೆ ಜೈಲಿನ ಶರಾವತಿ ವಾರ್ಡ್‌ನ 42ನೇ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಸವರಾಜ್ (38) ಸಾವನ್ನಪ್ಪಿರುವ ಖೈದಿ .

ನಿನ್ನೆ ಸಂಜೆ ಪ್ಯಾಂಟ್‌ನಿಂದ ನೇಣು ಬಿಗಿದುಕೊಡು ಸಾವನ್ನಪ್ಪಿದ್ದು .ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಶಿಕಾರಿಪುರದ ಸೊಸೈಟಿ ಕೇರಿಯಲ್ಲಿ ವಾಸವಿದ್ದ ಬಸವರಾಜ್, ಜೂನ್ 11ರಂದು ಕುಡಿದ ಅಮಲಿನಲ್ಲಿ ತನ್ನ ಪತ್ನಿ ಮಂಜುಳಾ ಅವರ ಶೀಲ ಶಂಕಿಸಿ ಜಗಳವಾಡಿ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ್ದರು. ನಂತರ ತಲೆಮರೆಸಿಕೊಂಡಿದ್ದ ಇವರನ್ನು ಶಿಕಾರಿಪುರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದರು.

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor