ಸೊರಬ : ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ರೈತರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಟಿ.ಜಿ. ಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾಲೇಶಪ್ಪ ಗೌಡ (52) ಮೃತಪಟ್ಟ ದುರ್ದೈವಿ ರೈತ ಎಂದು ಗುರುತಿಸಲಾಗಿದೆ.

ರೈಲು ಪ್ರಯಾಣಿಕರ ಗಮನಕ್ಕೆ! ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಹಾಲೇಶಪ್ಪ ಅವರು ತಮ್ಮ ತೋಟಕ್ಕೆ ಹೋಗುತ್ತಿದ್ದ ಮಾರ್ಗಮಧ್ಯೆ ಕೆರೆಯ ಏರಿಯ ಮೇಲೆ ನಡೆಯುವಾಗ ಆಯತಪ್ಪಿ ನೀರಿನಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸಮಯದಲ್ಲಿ ಸ್ಥಳದಲ್ಲಿ ಸಹಾಯಕ್ಕೆ ಯಾರೂ ಇಲ್ಲದ ಕಾರಣ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.