soraba news today live ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕುನಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ನವ ವಿವಾಹಿತರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಹರೂರು ಕೆರೆ ಏರಿ ಮೇಲೆ ಈ ಘಟನೆ ಕಳೆದ ಸೋಮವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ರವಿ ರಾಮಪ್ಪ ಎಂಬ ಹೆಸರಿನ 29 ವರ್ಷದ ಯುವಕ ಸಾವನ್ನಪ್ಪಿದ್ದಾರೆ.
soraba news today live / ಕಳೆದ ತಿಂಗಳಲ್ಲಿ ನಡೆದಿತ್ತು ಮದುವೆ
ಕೂಲಿ ಕೆಲಸ ಮಾಡುತ್ತಿದ್ದ ರವಿಯವರು ತಮ್ಮ ಕೆಲಸ ಮುಗಿಸಿಕೊಂಡು ಸಾಗರದಿಂದ ಹರೂರು ಮಾರ್ಗವಾಗಿ ಕುಂಶಿಗೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ರಸ್ತೆಯಲ್ಲಿ ನಾಯಿಯೊಂದು ಬೈಕ್ಗೆ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಪರಿಣಾಮ ರವಿ ಕೂಡ ಕೆಳಕ್ಕೆ ಬಿದ್ದಿದ್ದು ಅವರಿಗೆ ತೀವ್ರ ಪೆಟ್ಟಾಗಿದೆ. ಅಲ್ಲಿಯೇ ಅವರು ಸಾವನ್ನಪ್ಪಿದ್ದಾರೆ.
ಕಳೆದ ಏಪ್ರಿಲ್ 9ರಂದು ರವಿಯವರ ವಿವಾಹ ನಡೆದಿತ್ತು. ಮದುವೆಯಾಗಿ ತಿಂಗಳು ಕಳೆಯುವಷ್ಟರಲ್ಲಿಯೇ ರವಿಯವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.