ಸೊರಬ: ಬೆಂಕಿ ಹಚ್ಚಿಕೊಂಡು ಆತ್ಮ*ಹತ್ಯೆಗೆ ಯತ್ನಿಸಿದ್ದ ನರ್ಸ್ ಸಾವು

ಹಂಚಿಕೊಳ್ಳಿ
WhatsApp Facebook X Telegram
Soraba Staff Nurse Dies After Suicide Attempt
Soraba Staff Nurse Dies After Suicide Attempt

Soraba ಸೊರಬ : ಕಳೆದ ಮಾರ್ಚ್ 29 ರಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಡಯಾಗ್ನೋಸ್ಟಿಕ್ ಕೇಂದ್ರದ ಸಿಬ್ಬಂದಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಣಿಪಾಲದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಶಿವಮೊಗ್ಗ ಏರ್​ಪೋರ್ಟ್ ಸಮಾಚಾರ! ತುಂಗಾ ಸ್ಟೇಷನ್​ನಲ್ಲಿ ಕೊಲೆಯತ್ನದ FIR!

ಮೃತ ಮಹಿಳೆಯನ್ನು ಸೊರಬ ತಾಲೂಕಿನ ಉಳವಿ ಗ್ರಾಮದ ನಿವಾಸಿ ಶ್ವೇತಾ (30) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಸ್ಟಾಫ್ ನರ್ಸ್ ಆಗಿದ್ದ ಇವರು, ಏಳು ವರ್ಷಗಳ ಹಿಂದೆ ಅದೇ ಗ್ರಾಮದ ನವೀನ್ ಎಂಬುವವರನ್ನು ಮದುವೆಯಾಗಿದ್ದರು. ದಂಪತಿಗೆ 4 ವರ್ಷದ ಹೆಣ್ಣು ಮಗು ಇದ್ದು, ಶ್ವೇತಾ ಪ್ರಸ್ತುತ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಹಿನ್ನೆಲೆ

ಮಾ.29ರಂದು ಅತ್ತೆಯ ಮನೆಯ ಹಿಂಭಾಗದಲ್ಲಿದ್ದ ತನ್ನ ನಿವಾಸದಲ್ಲೇ ಶ್ವೇತಾ ಮೈಮೇಲೆ ಬೆಂಕಿ ಹಚ್ಚಿಕೊಂಡಿದ್ದರು. ಶೇ. 90ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಮಣಿಪಾಲದ  ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸ್ಥಿತಿ ಚಿಂತಾಜನಕವಾಗಿದ್ದರಿಂದ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. 

Soraba Staff Nurse Dies After Suicide Attempt

Soraba Staff Nurse Dies After Suicide Attempt
Staff Nurse Dies After Suicide Attempt
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor