ಸೊರಬ: ಮನೆಯ ತೊಲೆಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯ ಶವ ಪತ್ತೆಯಾದ ಘಟನೆ ಪಟ್ಟಣದ ಕೆಇಬಿ ಕಾಲೋನಿಯಲ್ಲಿ ನಡೆದಿದೆ. ಮೂಲತಃ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಮ್ಮನಹಳ್ಳಿಯ ಕರಿಬಸವರಾಜ (25) ಮೃತ ಗ್ರಾಮ ಲೆಕ್ಕಿಗ, ಕಳೆದ ನಾಲ್ಕು ವರ್ಷಗಳಿಂದ ಚಂದ್ರಗುತ್ತಿ ವೃತ್ತದಲ್ಲಿ ಗ್ರಾಮ ಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಪಟ್ಟಣದ ಕೆಇಬಿ ಕಾಲೋನಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಸ್ವಗ್ರಾಮದಿಂದ ಘಟನೆಯ ಹಿಂದಿನ ದಿನವಷ್ಟೆ ಆಗಮಿಸಿದ್ದರು. ಸ್ನೇಹಿತರೋರ್ವರು ಕರ್ತವ್ಯ ಮುಗಿಸಿ ಮನೆಗೆ ಬಂದು ನೋಡಿದಾಗ ನೇಣುಹಾಕಿ ಕೊಂಡ ಸ್ಥಿತಿಯಲ್ಲಿ ಕರಿಬಸವರಾಜ ಶವ ಪತ್ತೆಯಾಗಿದೆ. ತನ್ನ ಮಗನ ಸಾವಿನ ಕುರಿತು ಅನುಮಾನವಿದೆ ಎಂದು ಕರಿಬಸವರಾಜ್ ತಂದೆ ಬಸವರಾಜ್ ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw