ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು! ನಡೆದಿದ್ದರ ಬಗ್ಗೆ ಎಸ್​ಪಿ ಹೇಳಿದ್ದೇನು?

Malenadu Today

SHIVAMOGGA  |   Dec 6, 2023 | ವಿದ್ಯಾರ್ಥಿನಿ ಮೇಘಶ್ರೀ ಸಾವಿನ ಪ್ರಕರಣದಲ್ಲಿ ಪೋಷಕರು ಹಾಗೂ ವಿವಿಧ ಸಂಘಟನೆಗಳು ಅಂತಿಮವಾಗಿ ತಮ್ಮ ಪ್ರತಿಭಟನೆಯನ್ನ ಹಿಂಪಡೆದಿವೆ. ಪ್ರಕರಣದ ತನಿಖೆ ನಂತರ ಕ್ರಮ ಕೈಗೊಳ್ಳುವ ಭರವಸೆಯನ್ನು ಪೊಲೀಸ್ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. 

Malenadu Today

ಕೋಟೆ ಪೊಲೀಸ್ ಸ್ಟೇಷನ್

ಪ್ರತಿಷ್ಟಿತ  ಪಿಯು ಕಾಲೇಜಿನ 5ನೇ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

READ : ಪರೀಕ್ಷೆ ನಡೆಯುತ್ತಿರುವಾಗಲೇ ಕಟ್ಟಡದಿಂದ ಕೆಳಕ್ಕೆ ಬಿದ್ದು ವಿದ್ಯಾರ್ಥಿನಿ ಸಾವು! ನಡೆದಿದ್ದೇನು?

ಎಸ್‌ಪಿ  ಜಿ.ಕೆ.ಮಿಥುನ್‌ಕುಮಾರ್

ಇನ್ನೂ ಈ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿರುವ ಎಸ್​ಪಿ ಜಿ.ಕೆ. ಮಿಥುನ್ ಕುಮಾರ್, ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿನಿ ಹೊಟ್ಟೆ ನೋವು ಕಾರಣ ನೀಡಿ ಕಂಪ್ಯೂಟರ್ ಕೊಠಡಿಯಲ್ಲಿದ್ದರು. ಸಿಬ್ಬಂದಿ ಆಚೆ ಹೋದಾಗ ಐದನೇ ಮಹಡಿಯ, ಕಟ್ಟಡದಿಂದ ಹಾರಿ ಮೃತಪಟ್ಟಿದ್ದಾರೆ. ಪ್ರಕರಣ ಬಗ್ಗೆ ಎಲ್ಲ ಆಯಾಮಾಗಳಿಂದಲೂ ತನಿಖೆ ನಡೆಸುತ್ತಿದ್ದೇವೆ. ಸಂಪೂರ್ಣ ತನಿಖೆ ಬಳಿಕ ಸತ್ಯ ಹೊರತರಲಿದ್ದೇವೆ ಎಂದಿದ್ದಾರೆ. 

 

Share This Article