KARNATAKA NEWS/ ONLINE / Malenadu today/ Sep 1, 2023 SHIVAMOGGA NEWS
ಶಿವಮೊಗ್ಗದಲ್ಲಿ ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಳ್ಳತ್ತಿದೆ. ಅಲ್ಲದೆ, ಈ ಸಂಬಂಧ ಪ್ರಮುಖ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಜೊತೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಸಾರ್ವಜನಿಕರಿಗೂ ಸಹ ಶಿವಮೊಗ್ಗದ ಗಣೇಶೋತ್ಸವದ ಸಂದರ್ಭದಲ್ಲಿ ಪೊಲೀಸರ ಜೊತೆಗೆ ಸ್ವಯಂಸೇವಕರಾಗಿ ಕೆಲಸ ಮಾಡುವ ಅವಕಾಶವನ್ನು ನೀಡುತ್ತಿದೆ.
ಹೌದು, ಈ ಸಂಬಂಧ ಎಸ್ಪಿ ಮಿಥುನ್ ಕುಮಾರ್ ಪ್ರಕಟಣೆಯನ್ನು ನೀಡಿದ್ದು, ಮುಂಬರುವ ಗಣೇಶ ಹಬ್ಬದ ಸಂದರ್ಭದಲ್ಲಿ ಪೊಲೀಸ್ ಇಲಾಖಾ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಸಾರ್ವಜನಿಕರು / ಸಂಘ ಸಂಸ್ಥೆ ಯವರು ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ಭೇಟಿ ನೀಡಿ ತಮ್ಮ ಹೆಸರು ಮತ್ತು ವಿಳಾಸದ ವಿವರವನ್ನು ದಿನಾಂಕಃ 05-09-2023 ರ ಒಳಗಾಗಿ ನೊಂದಾಯಿಸಿಕೊಳ್ಳಲು ತಿಳಿಸಿದ್ದಾರೆ.
ಸೆಪ್ಟೆಂಬರ್ 15 ಕ್ಕೆ ಶಿವಮೊಗ್ಗದಲ್ಲಿ ಅಂಚೆ ಇಲಾಖೆಯಿಂದ ನೇರ ಸಂದರ್ಶನ! ಯಾರೆಲ್ಲಾ ಪಾಲ್ಗೊಳ್ಳಬಹುದು ವಿವರ ಇಲ್ಲಿದೆ
ಅಂಚೆ ಅಧೀಕ್ಷಕರು, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇವರ ವತಿಯಿಂದ ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನಿಯುಕ್ತಿಗೊಳಿಸಲು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಸೆ.15 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಹಾಜರಾಗಬೇಕು.
ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿರುತ್ತದೆ. ಕನಿಷ್ಟ 18 ವರ್ಷ ಹಾಗೂ ಗರಿಷ್ಟ ಮಿತಿ ಇರುವುದಿಲ್ಲ. ನಿರುದ್ಯೋಗಿ ಹಾಗೂ ಸ್ವಯ ಉದ್ಯೋಗ ನಿರತ ಯುವಕರು, ವಿಮಾ ಕಂಪೆನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯ್ತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳು ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ಇನ್ನಷ್ಟು ಸುದ್ದಿಗಳು
SHIVAMOGGA AIRPORT ನಿಂದ ವಿಮಾನಯಾನ! ಪ್ರತಿ ಟಿಕೆಟ್ಗೆ 500 ರೂಪಾಯಿ ಸಬ್ಸಿಡಿ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ಇಂಡಿಗೋ ಪ್ಲೈಟ್
