ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025: ಶಿವಮೊಗ್ಗ:: ನಗರದ ಮೆಗ್ಗಾನ್ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಕ್ವಾಟ್ರಸ್‌ನಲ್ಲಿ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ, ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಮರ್ಡರ್-ಸುಸೈಡ್ ಪ್ರಕರಣ ದಾಖಲಾಗಿದೆ. ಪೂರ್ವಿಕಾ ಎಂಬ ಸಣ್ಣ ಹುಡುಗಿಯ ಕೊಲೆಯಾಗಿದ್ದು, ಮೃತ ಪೂರ್ವಿಕಾಳ ತಲೆ ಮತ್ತು ಮುಖದ ಭಾಗಕ್ಕೆ ಚುಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ,” ಎಂದು ಮಾಹಿತಿ ನೀಡಿದರು.

ಮೃತಳ ದೇಹದ ಮೇಲೆ ನಿಂತು ಆಕೆಯ ತಾಯಿ ಶ್ರುತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಎರಡು ದೇಹಗಳು ಪತ್ತೆಯಾಗಿವೆ, ಮೃತೆ ಶ್ರುತಿಯ ಪತಿ ರಾಮಣ್ಣ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಪತ್ನಿ ಹಾಗೂ ಮಗಳು ಸಾವಿಗೀಡಾಗಿದ್ದಾರೆ. “ರಾಮಣ್ಣ ಅವರು ನೈಟ್ ಡ್ಯೂಟಿ ಮುಗಿಸಿ ಬೆಳಿಗ್ಗೆ ಮನೆಗೆ ಬಂದಾಗ ಬಾಗಿಲು ತೆರೆದಿರಲಿಲ್ಲ. ನಂತರ ಅಕ್ಕಪಕ್ಕದವರ ನೆರವಿನಿಂದ ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಎಸ್ಪಿ ಹೇಳಿದರು.

ಇದನ್ನು ಸಹ ಓದಿ : ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್ ಧರಿಸಿದ್ದ ಆಗಂತುಕ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!