ಪ್ರಭಾಸ್-ಸಂದೀಪ್ ರೆಡ್ಡಿ ವಂಗಾ ಕಾಂಬಿನೇಶನ್‌ನ ಸ್ಪಿರಿಟ್ ರಿಲೀಸ್ ಡೇಟ್ ಫಿಕ್ಸ್ 

ಹಂಚಿಕೊಳ್ಳಿ
WhatsApp Facebook X Telegram
Spirit Movie
Spirit Movie

ಅರ್ಜುನ್ ರೆಡ್ಡಿ ಅನಿಮಲ್ ಅಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಈಗ ರೆಬೆಲ್ ಸ್ಟಾರ್ ಪ್ರಭಾಸ್ ಜೊತೆಗೂಡಿ ಸ್ಪಿರಿಟ್ ಚಿತ್ರದ ಮೂಲಕ ಅಬ್ಬರಿಸಲು ಸಜ್ಜಾಗಿದ್ದಾರೆ. ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ತೆರೆ ಎಳೆದಿರುವ ಚಿತ್ರತಂಡ, ಸಿನಿಮಾ ಬಿಡುಗಡೆಯ ದಿನಾಂಕವನ್ನು ಇದೀಗ ಘೋಷಿಸಿದೆ. ಈ ಹೈ ವೋಲ್ಟೇಜ್ ಆಕ್ಷನ್ ಸಿನಿಮಾ ಮಾರ್ಚ್ 5, 2027 ರಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ.

ಸಂಸದರ ಸಂವಾದ! ಈಶ್ವರಪ್ಪನವರ ಆಕ್ರೋಶ! ಶಿವಮೊಗ್ಗ ಪತ್ರಿಕಾಭವನದಲ್ಲಿ? ಇವತ್ತಿನ ಇ-ಪೇಪರ್​ ಓದಿ

Spirit Movie ಇತ್ತೀಚೆಗಷ್ಟೇ ಹೊಸ ವರ್ಷದ ಪ್ರಯುಕ್ತ ಬಿಡುಗಡೆಯಾದ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚು ಹಚ್ಚಿದೆ (Explosive). ಈ   ಪೋಸ್ಟರ್‌ನಲ್ಲಿ ಪ್ರಭಾಸ್ ಉದ್ದನೆಯ ಕೂದಲು, ಗಡ್ಡ ಹಾಗೂ ಶರ್ಟ್ ಧರಿಸದ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವಾಗಿ ನಟಿ ತೃಪ್ತಿ ದಿಮ್ರಿ, ಪ್ರಭಾಸ್ ಬಾಯಲ್ಲಿರುವ ಸಿಗರೇಟ್‌ಗೆ ಬೆಂಕಿ ಹಚ್ಚುತ್ತಿರುವ ಸ್ಟೈಲಿಶ್ ಫೋಟೋ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಈ ಚಿತ್ರದಲ್ಲಿ ಪ್ರಭಾಸ್ ಅವರಿಗೆ ಜೋಡಿಯಾಗಿ ತೃಪ್ತಿ ದಿಮ್ರಿ ನಟಿಸುತ್ತಿದ್ದು, ಬಾಲಿವುಡ್ ನಟ ವಿವೇಕ್ ಒಬೆರಾಯ್ ಪ್ರಬಲ ವಿಲನ್ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಹಿರಿಯ ನಟ ಪ್ರಕಾಶ್ ರಾಜ್ ಹಾಗೂ ಕಾಂಚನಾ ಅವರಂತಹ ಘಟಾನುಘಟಿ ಕಲಾವಿದರು ತಾರಾಬಳಗದಲ್ಲಿದ್ದಾರೆ. ಭಾರತೀಯ ಭಾಷೆಗಳಾದ ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಮಾತ್ರವಲ್ಲದೆ, ಮ್ಯಾಂಡರಿನ್, ಜಪಾನೀಸ್ ಮತ್ತು ಕೊರಿಯನ್ ಭಾಷೆಗಳಲ್ಲೂ ಈ ಸಿನಿಮಾ ತೆರೆಕಾಣುತ್ತಿರುವುದು ವಿಶೇಷ.

Spirit Movie
Spirit Movie

Spirit Movie Release Date Out

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor