SHIVAMOGGA | MALENADUTODAY NEWS | Aug 16, 2024 ಮಲೆನಾಡು ಟುಡೆ
ಅರಣ್ಯ ಒತ್ತುವರಿ ವಿಚಾರದಲ್ಲಿ ಮಲೆನಾಡು ಪ್ರದೇಶಗಳಲ್ಲಿ ಈಗಾಗಲೇ ವಿರೋಧ ತೀವ್ರಗೊಳ್ಳುತ್ತಿದೆ. ಈ ನಡುವೆ ಅರಣ್ಯ ಒತ್ತುವರಿ ತೆರವು ವಿಷಯಕ್ಕೆ ರಂಭಾಪುರಿ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ (Sri Jagadguru Rambhaapuri Veerasimhasana Mahasamsthana Petha)ಯವರು ಬಡವರು ಒತ್ತುವರಿ ಮಾಡಿರುವ ಭೂಮಿಯನ್ನು ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ ಎಂದಿದ್ದಾರೆ. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ವಿರೋಧವಿಲ್ಲ ಆದರೆ ಒತ್ತುವರಿ ತೆರವು ನೆಪದಲ್ಲಿ ಬಡವರ ಭೂಮಿ ತೆರವುಗೊಳಿಸುತ್ತಿರುವುದು ಒಳ್ಳೆಯ ಬೆಳವಣಿಗಯಲ್ಲ. ಮಲೆನಾಡಿನಲ್ಲಿ ಸಣ್ಣ ಸಣ್ಣ ಬಡ ಕುಟುಂಬಗಳು ಬದುಕುತ್ತಿವೆ. 1-2 ಎಕರೆ ಭೂಮಿ ಸಾಗುವಳಿ ಮಾಡಿ ಬದುಕು ಕಟ್ಟಿಕೊಂಡವರು ಇದ್ದಾರೆ. ಅವರಿಗೆ ಯಾವುದೇ ತಿಳುವಳಿಕೆ ನೀಡದೆ ಕಾಫಿ ಗಿಡಗಳನ್ನು ಅರಣ್ಯ ಇಲಾಖೆ ಕತ್ತರಿಸಿ ಹಾಕುತ್ತಿರುವುದು ನೋವಿನ ಸಂಗತಿ ಎಂದಿದ್ದಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ

ಬಡವರು ಒತ್ತುವರಿ ಮಾಡಿರುವ ಭೂಮಿ ಅರಣ್ಯ ವ್ಯಾಪ್ತಿಗೆ ಬರುವುದಾದರೆ ಅದನ್ನು ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಒತ್ತುವರಿ ಮಾಡಿರುವ ರೈತರಿಗೆ ಸಕ್ರಮ ಮಾಡಿಕೊಡಲಿ. ಸಾವಿರಾರು ಎಕರೆ ಒತ್ತುವರಿ ಮಾಡಿರುವ ಭೂ ಮಾಲೀಕರು, ಕಾರ್ಪೋರೇಟ್ ಕಂಪನಿಗಳು ಮತ್ತು ಗಣಿಗಾರಿಕೆ ಮಾಡುತ್ತಿರುವವರ ಬಗೆಗೆ ಯಾವುದೇ ಕ್ರಮ ಕೈಗೊಳ್ಳದೆ ಕೇವಲ ಬಡವರು ಒತ್ತುವರಿ ಮಾಡಿರುವ ಭೂಮಿಯ ಮೇಲೆ ಇಂಥ ಕಠಿಣ ಕ್ರಮ ಒಳ್ಳೆಯದಲ್ಲ ಎಂದಿದ್ದಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ