SHIVAMOGGA | MALENADUTODAY NEWS | ಮಲೆನಾಡು ಟುಡೆ

SHIVAMOGGA | MALENADUTODAY NEWS | ಮಲೆನಾಡು ಟುಡೆಬೆಂಗಳೂರು |
ಬೆಂಗಳೂರು | ರಾಜ್ಯಮಟ್ಟದ 2024, 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಫೆಬ್ರವರಿ 25 ರಿಂದ ಆರಂಭವಾಗುವ ಪರೀಕ್ಷೆಯೂ ಮಾರ್ಚ್ 4 ರವರೆಗೆ ನಡೆಯಲಿದೆ. ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ ಇಲ್ಲಿwww.kseab.karnataka.gov.in ಪಡೆದುಕೊಂಡು, ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.
ಮೊದಲ 3 ಪರೀಕ್ಷೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರ ವರೆಗೆ ನಡೆಯಲಿವೆ. ಅನಂತರದ 3 ಪರೀಕ್ಷೆಗಳು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಅಥವಾ 5.15ರ ವರೆಗೆ ನಡೆಯಲಿವೆ ಎಂದು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ. ಯಾವ್ಯಾವ ಪರೀಕ್ಷೆ ಯಾವ್ಯಾವ ದಿನ ನಡೆಯುತ್ತದೆ ಎಂದು ತಿಳಿದುಕೊಳ್ಳಲಉ ಈ ಕೆಳಗೆ ಕೊಟ್ಟಿರುವ ಲಿಂಕ್ನ್ನು ಕ್ಲಿಕ್ ಮಾಡಿ.
SUMMARY | The School Examination and Evaluation Board has announced the revised schedule for the state-level SSLC preparatory examination for the year 2024, 25.
KEYWORDS | SSLC, preparatory examination, announced,