SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 10, 2025
ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮಾರ್ಚ್ 21 ರಿಂದ ಏಪ್ರಿಲ್ 4, 2025 ರವರೆಗೆ ನಡೆಸಿತ್ತು. ರಾಜ್ಯದಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್ಎಸ್ ಎಸ್ಸಿ ಪರೀಕ್ಷೆಯನ್ನು ಬರೆದಿದ್ದರು. ಏಪ್ರಿಲ್ 15 ನಂತರ ಸರಿಸುಮಾರು 75 ಸಾವಿರಕ್ಕೂ ಅಧಿಕ ಶಿಕ್ಷಕರಿಂದ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಗಳು ಆರಂಭವಾಗಲಿದ್ದು, ತದನಂತರ ಪರೀಕ್ಷಾ ಮಂಡಳಿ ಫಲಿತಾಂಶದ ದಿನಾಂಕವನ್ನು ಅಧೀಕೃತವಾಗಿ ಘೋಷಿಸಲಿದೆ.

ಫಲಿತಾಂಶ ಚೆಕ್ ಮಾಡೋದು ಹೇಗೆ
ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯಮಾಪನ ಮಂಡಳಿಯ ಅಧೀಕೃತ ವೆಬ್ ಸೈಟ್ ಆದಂತಹ kseab.karnataka.gov.in, ಹಾಗೂ karresults.nic.in ಈ ಲಿಂಕ್ನ್ನು ಬಳಸಿ ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
SUMMARY | The results of the SSLC exams are likely to be announced in the last week of April or the first week of May.
KEYWORDS | SSLC, result, exams, April, may,