sslc exam 2024 | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

sslc exam 2024 | It is mandatory for SSLC students to follow these rules

sslc exam 2024 |  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
sslc exam 2024

shivamogga Mar 25, 2024 ರಾಜ್ಯದೆಲ್ಲೆಡೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (sslc exam 2024) ಆರಂಭಗೊಂಡಿವೆ. ಮಕ್ಕಳು ಅದ್ಭುತವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಈ ನಡುವೆ ಪರೀಕ್ಷಾ ಕೊಠಡಿಗಳಲ್ಲಿ ಹಿಂದಿಗಿಂತಲೂ ಹೆಚ್ಚು ಶಿಸ್ತು ಹಾಗೂ ಬಿಗಿ ಕ್ರಮಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಕೈಗೊಂಡಿದೆ. ಮಕ್ಕಳು ಮುಕ್ತವಾಗಿ ಪರೀಕ್ಷೆಯನ್ನು ಅಟೆಂಡ್‌ ಮಾಡುವ ಸಲುವಾಗಿ ಹಾಗೂ ಕಾಪಿ ಮಾಡುವಂತಹ ಅಕ್ರಮವನ್ನ ತಡೆಯುವ ಸಲುವಾಗಿ ಮೇಲ್ವಿಚಾರಕರ ಜವಾಬ್ದಾರಿಯನ್ನು ಹೆಚ್ಚಿಸಲಾಗಿದೆ.. ಈ ನಿಟ್ಟಿನಲ್ಲಿ ಹಲವು ನಿಯಮಗಳನ್ನು ಜಾರಿಗೆ ತರಲಾಗಿದ್ದು, ಅವುಗಳನ್ನ ವಿದ್ಯಾರ್ಥಿಗಳು ಪಾಲನೆ ಮಾಡುವುದು ಕಡ್ಡಾಯವಾಗಿದೆ. 

ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ sslc karnataka

1) ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ನೀಡಲಾಗಿದೆ.

2) ಸ್ಟ್ರಾಟಿಸ್ಟಿಕ್ಸ್ ವಿಷಯಕ್ಕೆ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಅನ್ನು ಬಳಸಲು ಅನುಮತಿ.

3) ಪರೀಕ್ಷೆಯ ಅಂತಿಮವಾದ ಬೆಲ್ ಹೊಡೆಯುವ ಮುನ್ನ ಪರೀಕ್ಷೆ ಕೊಠಡಿಯಿಂದ ತೆರಳುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆಯನ್ನು ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.

4) ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯವಾಗಿ ಇರಬೇಕು

5) ಪರೀಕ್ಷೆಯನ್ನು ಬರೆಯುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ KSRTC ಬಸ್ ನಲ್ಲಿ ಪ್ರಯಾಣವನ್ನು ಮಾಡಬಹುದಾಗಿದೆ.

6) ಮೊಬೈಲ್ ಫೋನ್, ಹಾಗೂ ಇತರೆ ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ

7) ಪರೀಕ್ಷಾ ಅವಧಿಗಿಂತ ಮುಂಚೆ ಹೊರಗೆ ಹೋಗುವಂತಹ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯನ್ನು ನೀಡಲಾಗುವುದಿಲ್ಲ.

ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ನ ವ್ಯಾಪ್ತಿಯಲ್ಲಿ ಯಾವುದೇ ರೀತಿಯ STD, ಝರಾಕ್ಸ್, ಮೊಬೈಲ್ ಪೇಜರ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.