SSLC EXAM/ ಶಿವಮೊಗ್ಗದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಸಿದ್ದತೆ ಹೇಗಿದೆ! ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ ಏನೇನು ವ್ಯವಸ್ಥೆ ಮಾಡುತ್ತಿದೆ ಓದಿ

SSLC EXAM/ How are the preparations for the SSLC exam in Shimoga? Read what the district administration is making arrangements for the students.

SSLC EXAM/  ಶಿವಮೊಗ್ಗದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಸಿದ್ದತೆ ಹೇಗಿದೆ! ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ ಏನೇನು ವ್ಯವಸ್ಥೆ ಮಾಡುತ್ತಿದೆ ಓದಿ
SSLC EXAM/ ಶಿವಮೊಗ್ಗದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಸಿದ್ದತೆ ಹೇಗಿದೆ! ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ ಏನೇನು ವ್ಯವಸ್ಥೆ ಮಾಡುತ್ತಿದೆ ಓದಿ

SSLC EXAM/ ಶಿವಮೊಗ್ಗ :  ಇದೇ :ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ ಎಸ್‌ಎಲ್‌ಸಿ ಪರೀಕ್ಷೆಗಳು (sslc exam time table 2023 ) ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ವಾದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.  ಈ ಸಂಬಂಧ ನಿನ್ನೆ  ಸರ್ಕಾರಿ ನೌಕರರ ಭವನದಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಪರೀಕ್ಷಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. 

ಬಳಿಕ ಮಾತನಾಡಿದ ಡಿಸಿ ಡಾ.ಸೆಲ್ವಮಣಿ (Deputy Commissioner Dr. Selvamani R,) 94 ಸ್ಥಾನಿಕ ಜಾಗೃತ ದಳದ ಅಧಿ ಕಾರಿಗಳು,  ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ 02 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಒಟ್ಟು 23372 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 22068 ರೆಗ್ಯೂಲರ್ ವಿದ್ಯಾರ್ಥಿಗಳು, 814 ಪುನರಾವರ್ತಿತ ವಿದ್ಯಾರ್ಥಿಗಳು, 357 ಖಾಸಗಿಯಾಗಿ ನೊಂದಾಯಿಸಿ ವಿದ್ಯಾರ್ಥಿಗಳು, 133 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ.

94 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 94 ಮುಖ್ಯ ಅಧೀಕ್ಷಕರು, 31 ಅನ್ಯ ಇಲಾಖಾ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 33 ಮಾರ್ಗಗಳನ್ನು ರಚಿಸಲಾಗಿದ್ದು, 33 ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ 350 ಕ್ಕೂ ಹೆಚ್ಚು ಇರುವ ಕಡೆ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 11 ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು

ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸಮರ್ಪಕ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಸಂಬಂಧಿಸಿದ ಬಿಇಓಗಳು ಪರಿಶೀಲಿಸಿ ವರದಿ ನೀಡಿರುತ್ತಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. ಸಿಸಿ ಟಿವಿ ಇಲ್ಲದ ಕಡೆ ಅದಕ್ಕೆ ವ್ಯವಸ್ಥೆ ಮಾಡಬೇಕು ಎಂದು ಡಿಡಿಪಿಐ ಅವರಿಗೆ ಸೂಚನೆ ನೀಡಿದರು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಬಸ್ ವ್ಯವಸ್ಥೆ 

ಕೆಲವು ಹಳ್ಳಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಅಥವಾ ಬಸ್ ನಿಲುಗಡೆ ಇರುವುದಿಲ್ಲ. ಇಂತಹ ಸಮಸ್ಯೆಗಳನ್ನು ತಾಲೂಕುಗಳ ಬಿಇಓ ಗಳು ಪರಿಶೀಲಿಸಿ ಕೂಡಲೇ ವರದಿ ನೀಡಬೇಕು. ಅಂತಹ ಕಡೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಇನ್ನಿತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.  ಪರೀಕ್ಷಾ ಕರ್ತವ್ಯ ನಿರತ ಅಧಿಕಾರಿ/ಸಿಬ್ಬಂದಿಗಳು ಅತ್ಯಂತ ಮುತುವರ್ಜಿಯಿಂದ ಪರೀಕ್ಷಾ ಕರ್ತವ್ಯವನ್ನು ನಿರ್ವಹಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಿರಬೇಕಾದ ಸಮಯ ಮತ್ತಿತರೆ ಸೂಚನೆಗಳ ಕುರಿತು ತಿಳುವಳಿಕೆ ನೀಡಬೇಕು.
ಯಾವುದೇ ರೀತಿಯ ಅಡಚಣೆ, ಅವ್ಯವಸ್ಥೆ ಆಗದಂತೆ ವ್ಯವಸ್ಥಿತವಾಗಿ ಮತ್ತು ಸುಗಮವಾಗಿ ಪರೀಕ್ಷೆಯನ್ನು ನಡೆಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡು, ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ಪರೀಕ್ಷೆಯ ಮುಖ್ಯ ಅಧೀಕ್ಷಕರು, ಸಹಾಯಕ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಮತ್ತು ವೀಕ್ಷಕರು ಅನುಸರಿಸಬೇಕಾದ ಮಾರ್ಗಸೂಚಿ ಕುರಿತು ಹೇಳಿದರು.ಈ  ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಖಜಾನೆ ಉಪ ನಿರ್ದೇಶಕಿ ಸಾವಿತ್ರಿ, ಬಿಇಓ ಗಳು, ಇತರೆ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.

‘Read/ ksrtc shivamogga /ಇವತ್ತು ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ! ನಗರ, ಸಾಮಾನ್ಯ ವೇಗದೂತ ಬಸ್​ಗಳು ಸಿಗೋದು ಡೌಟು! ಕಾರಣವೇನು?

Read / *comrade lingappa shivamogga/ ಈ ವಿಶೇಷ ಮಹನೀಯರು ಇನ್ನು ಮಾತಿಗೆ ಸಿಗರು! ಕ್ರಾಮೆಡ್​ ಲಿಂಗಪ್ಪರ ಹೆಗ್ಗಳಿಕೆ ಎಂತದ್ದು ಗೊತ್ತಾ*

Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today,Shivamogga Crime News/ comrade lingappa shivamogga, ksrtc shivamogga/government bus, KSRTC, city transport, vagadhoota, Shivamogga district government bussslc exam,exam winner sslc classes,sslc exam winner,sslc public exam,exam winner sslc,sslc,sslc online class,sslc free online class,sslc all chapter,sslc kerala,sslc pareeksha,exam winner live,sslc biology,sslc chemistry, ಎಸ್​ಎಸ್​ಎಲ್​ಸಿ ಎಕ್ಸಾಂ, ಶಿವಮೊಗ್ಗ ಎಸ್​ಎಸ್​ಎಲ್​ಸಿ ಪರೀಕ್ಷೆ, ಜಿಲ್ಲಾಡಳಿತ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಶಿವಮೊಗ್ಗ ಬಿಇಒ ಆಫೀಸ್, ಹಳ್ಳಿಗಳಿಗೆ ಬಸ್ ವ್ಯವಸ್ಥೆ, ಕೆಎಸ್​ಆರ್​ಟಿಸಿ ಬಸ್,SSLC Exam, Shimoga SSLC Exam, District Administration, Deputy Commissioner Dr. Selvamani R, Shivamogga BEO Office, Bus Arrangement to Villages, KSRTC Bus sslc exam time table 2023 karnataka pdf,sslc exam 2023 question paper,2023 sslc exam pattern,sslc exam 2023 tamil nadu,sslc preparatory exam 2023,sslc preparatory exam time table 2023 karnataka,karnataka sslc examination dates,cbse sslc exam 2023,