sslc exam topper : ಮರು ಪರೀಕ್ಷೆ ಬರೆದು ರಾಜ್ಯಕ್ಕೆ ಟಾಪರ್ ಆದ ಸಂಜನಾ
ಎಸ್ಎಸ್ಎಲ್ಸಿಯಲ್ಲಿ ಒಂದು ಅಂಕದಿಂದ ರಾಜ್ಯಕ್ಕೆ ಟಾಪರ್ ಆಗುವ ಅವಕಾಶದಿಂದ ವಂಚಿತರಾಗಿದ್ದ ವಿದ್ಯಾರ್ಥಿನಿ ಮತ್ತೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಗಳಿಸಿದ್ದಾರೆ.
ಶಿವಮೊಗ್ಗದ ಆದಿಚುಂಚನಗಿರಿ ಪ್ರೌಡ ಶಾಲೆಯ ವಿದ್ಯಾರ್ಥಿನಿ ಸಂಜನಾ ಎಂಬುವವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 624 ಅಂಕ ಗಳಿಸಿದ್ದರು. ಆದರೆ ಅವರಿಗೆ ಬಯಾಲಜಿಯಲ್ಲಿ ಒಂದು ಅಂಕ ಕಡಿಮೆ ಬಂದಿತ್ತು. ಈ ಹಿನ್ನೆಲೆ ವಿದ್ಯಾರ್ಥಿನಿ ಮತ್ತೆ ಬಯಾಲಾಜಿ ಪರೀಕ್ಷೆ ಬರೆದು 80ಕ್ಕೆ 80 ಅಂಕ ಪಡೆದಿದ್ದಾರೆ. ಈ ಮೂಲಕ 625ಕ್ಕೆ 625ಕ್ಕೆ ಅಂಕ ಪಡೆದ ಸಾಧನೆ ಮಾಡಿದ್ದಾರೆ.