ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ! ಇಲ್ಲಿದೆ ಲಿಸ್ಟ್!

Malenadu Today

SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS 

 

SHIVAMOGGA |    2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು  ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ- ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದೆ

 

ದಿನಾಂಕ: 01-12-2023 ರಂದು ಪ್ರಕಟಿಸಲಾಗಿರುವ ಈ ಪ್ರಕಟಣೆಯಲ್ಲಿ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ”ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ. 

 

ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-! ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 01-12-2023  ರಿಂದ  15-12-2023 ದಿನಗ:ಳ ಕಾಲಾವಕಾಶವನ್ನು ಸಹ ನೀಡಲಾಗಿದೆ.  

 

ಈ ಸಂಬಂಧ ಮಂಡಳಿಯ ಇಮೇಲ್​  chairpersonkseeb@gmail.com ಗೆ ಆಕ್ಷೇಪಣೆಯನ್ನು ಕಳುಹಿಸಬಹುದು.  ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560 003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸಬಹುದಾಗಿದೆ. 

 

 ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ

Malenadu Today

Malenadu Todayದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

Malenadu Today

 

 

Share This Article