sslc result 2024 karnataka date | ಮೇ ಏಳಕ್ಕೆ ಎಲೆಕ್ಷನ್‌ | ಮೇ 8 ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ

ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್‌, icse 10th result 2024, 2 result 2024 date, ssic karnataka gov in and karresults nic, 2024 ssic result, karnataka ssic result, ssic result date, ssic karnataka result 2024,

sslc result 2024 karnataka date | ಮೇ ಏಳಕ್ಕೆ ಎಲೆಕ್ಷನ್‌ | ಮೇ 8 ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ

SHIVAMOGGA | MALENADUTODAY NEWS | May 2, 2024  

 

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದೆ. ಇದೇ ಮೇ 8ರಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ.

 

ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ರಾಜ್ಯದ 2,750 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಆಯಾ ವಿಷಯಗಳ ಪರೀಕ್ಷೆಗಳು ಮುಗಿದ ಮರುದಿನವೇ ಮೌಲ್ಯ ಮಾಪನ ಕಾರ್ಯ ಆರಂಭಿಸಲಾಗಿತ್ತು. ಬೆಂಗಳೂರು ವರದಿ ಪ್ರಕಾರ ಈಗಾಗಲೇ ಎಲ್ಲ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಸದ್ಯ, ಅಂಕಗಳ ಕೂಡುವಿಕೆ ಕಾರ್ಯ ನಡೆಯುತ್ತಿದೆ. 

ಅಂತಿಮವಾಗಿ ಮೇ 6ರ ಒಳಗೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯಲಿರುವುದರಿಂದ 8ರಂದು ಫಲಿತಾಂಶ ಪ್ರಕಟಿಸಲು ಮಂಡಳಿ ನಿರ್ಧರಿಸಿದೆ.