POLITICS

ಪಿಯುಸಿ ಮಾದರಿಯಲ್ಲಿಯೇ ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶ! ವಿಶೇಷ ಸುದ್ದಿ ತಿಳಿಸಿದ ಮಧು ಬಂಗಾರಪ್ಪ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಪಿಯುಸಿ ಫಲಿತಾಂಶ ದಂತೆ ಎಸ್ಎಸ್ಎಲ್ಸಿ ಫಲಿತಾಂಶವೂ ಈ ಸರ್ತಿ ಉತ್ತಮ ಫಲಿತಾಂಶ ಬರಲಿದೆ ಅಂತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಪ್ರೆಸ್​ ಟ್ರಸ್ಟ್​ ಭವನದಲ್ಲಿ ಸುದ್ದಿಗೋಷ್ಟಿ ಆಯೋಜಿಸಿದ್ದ ಅವರು ಮಾತನಾಡ್ತಾ ಎಸ್​ಎಸ್​ಎಲ್​ಸಿ ರಿಸಲ್ಟ್ ಬಗ್ಗೆ ಸಿಎಂ ಸಿದ್ದರಾಮಯ್ಯರ ಜೊತೆ ಸಮಾಲೋಚಿಸಿ ಶೀಘ್ರವೆ ಉತ್ತರಿಸುವುದಾಗಿ ಹೇಳಿದರು.

ಈ ಸಲ ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶ

ಎಸ್ಎಸ್ ಎಲ್‌ಸಿ ಫಲಿತಾಂಶ ಬರಬೇಕಾಗಿತ್ತು. ಆದರೆ ಹಿಂದಿ ಭಾಷೆಗೆ ಅಂಕ ಕೊಡಬೇಕು ಎಂಬ ಹೈಕೋರ್ಟ್ ತೀರ್ಪಿನಂತೆ ಈ ಬಾರಿ ಅಂಕ ನೀಡಲಾಗುತ್ತಿದೆ. ಆ ನಿಟ್ಟಿನಲ್ಲಿ ಗೊಂದಲಕ್ಕೆ ಅವಕಾಶ ಇಲ್ಲದಂತೆ ಫಲಿತಾಂಶವನ್ನು ಅದಷ್ಟುಬೇಗ ಪ್ರಕಟಿಸಲಾಗುತ್ತದೆ ಎಂದರು

ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ತಪ್ಪಿಸುವ ಉದ್ದೇಶದಿಂದ ತೃತೀಯ ಭಾಷೆಗೆ ಕೇವಲ ಗ್ರೇಡ್ ಕೊಡಬೇಕೆಂಬ ತೀರ್ಮಾನ ತೆಗೆದು ಕೊಳ್ಳಲಾಗಿತ್ತು. ಆದರೆ ಹೈಕೋರ್ಟ್ ಈ ವರ್ಷ ನೀವು ಅಂಕವನ್ನೇ ನೀಡಿ, ಮುಂದಿನ ಬಾರಿ ಈ ಬಗ್ಗೆ ನಿರ್ಧರಿಸಿ ಎಂದಿದೆ ಹೀಗಾಗಿ ಹಿಂದಿ ಅಥವಾ ತೃತೀಯ ಭಾಷೆಗೂ ಕೂಡ ಅಂಕ ನೀಡಲಾಗುತ್ತಿದೆ.. ಆದರೆ ಮುಂದಿನ ವರ್ಷಕ್ಕೆ ಮತ್ತೊಮ್ಮೆ ನ್ಯಾಯಾಲಯದ ಮೇಟ್ಟಲೇರಿ ಗ್ರೇಡ್ ಪದ್ಧತಿ ಯನ್ನು ಉಳಿಸಿಕೊಳ್ಳಲು ಪ್ರಯತ್ನಿಸ ಲಾಗುವುದು ಅಂತಾ ಸ್ಪಷ್ಟ ಪಡಿಸಿದರು.

ಪಿಯುಸಿಯಲ್ಲೂ ಕೂಡ ಉತ್ತಮ ಫಲಿತಾಂಶ ಬಂದಿದ್ದು, ಸಾಕಷ್ಟು ಸುಧಾರಣೆಯಾಗಿದೆ. ಕಳೆದ ಸಾರಿ 30ಸಾವಿರ ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲೂ ಫೇಲಾಗಿ ದ್ದರು. ಆದರೆ ಈ ಬಾರಿ ಕೇವಲ 1777 ವಿದ್ಯಾರ್ಥಿಗಳು ಮಾತ್ರ ಎಲ್ಲಾ ವಿಷಯದಲ್ಲಿ ಫೇಲಾಗಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ

ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಪೋಷಕರು ಕಾರಣ

ಇನ್ನೂ ಇದೇ ವೇಳೆ ಉತ್ತಮ ಫಲಿತಾಂಶ ಬರಲು ಶಿಕ್ಷಕರು, ಪೋಷಕರು ಮತ್ತು ಶಿಕ್ಷಣ ದಲ್ಲಿನ ಬದಲಾವಣೆಗಳು ಕಾರಣವಾಗಿವೆ ಅಂತಾ ತಿಳಿಸಿದ ಸಚಿವರು ಈ ಸಂಬಂಧ ಇನ್ನಷ್ಟು ಅಪ್​ಡೇಟ್​ನ್ನು ಶೀಘ್ರವೇ ನೀಡಲಾಗುವುದು ಎಂದರು

 ಶಿವಮೊಗ್ಗ ಪಿಯುಸಿ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶ ನಿರೀಕ್ಷೆ  ಮಧು ಬಂಗಾರಪ್ಪ Shivamogga SSLC Results Expected to be Excellent Like PUC, Says Madhu Bangarappa
 ಶಿವಮೊಗ್ಗ ಪಿಯುಸಿ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶ ನಿರೀಕ್ಷೆ  ಮಧು ಬಂಗಾರಪ್ಪ Shivamogga SSLC Results Expected to be Excellent Like PUC, Says Madhu Bangarappa

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ