ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ!

ajjimane ganesh

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 17 2025: ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಜೇನುಗಳು ಅಲ್ಲಿದ್ದವರ ಮೇಲೆ ದಾಳಿ ನಡೆಸಿವೆ. ಈ ಘಟನೆಯಲ್ಲಿ 12 ಎಸ್.ಎಸ್.ಎಲ್.ಸಿ (SSLC) ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿಗೆ ಪೆಟ್ಟಾಗಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ :  ಇಬ್ಬರಿಗೆ ಗಂಭೀರ ಗಾಯ

- Advertisement -

ಬಗನಕಟ್ಟೆ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕರು ಬರುವುದು ತಡವಾಗಿದ್ದರಿಂದ ಮಕ್ಕಳು ಶಾಲೆಯ ಆವರಣದಲ್ಲಿದ್ದರು. ಈ ವೇಳೆ ಜೇನು ದಾಳಿ ನಡೆಸಿದೆ.  ಇನ್ನೂ ಜೇನು ಕಡಿತದಿಂದ ಪೆಟ್ಟಾದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ  ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗಿದೆ. ಈ ಪೈಕಿ ಶಿವಮೊಗ್ಗದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಆರು ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಉಳಿದವರಿಗೆ ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. 

SSLC Students and Staff Hospitalized After Massive Bee Attack at Shikaripura School
SSLC Students and Staff Hospitalized After Massive Bee Attack at Shikaripura School

ಈ ಬಗ್ಗೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಘಟನೆಯಲ್ಲಿ 12 ಮಕ್ಕಳಿಗೆ ಪೆಟ್ಟಾಗಿದೆ, ಅವರೆಲ್ಲರಿಗೂ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ. ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

SSLC Students and Staff Hospitalized After Massive Bee Attack at Shikaripura School
SSLC Students and Staff Hospitalized After Massive Bee Attack at Shikaripura School

ಕೆಎಸ್ಆರ್​​ಟಿಸಿ ಬಸ್​ನಲ್ಲಿ ಟಿಕೆಟ್​ ಮಾಡಿಸಲು ವ್ಯಾನಿಟಿ ಬ್ಯಾಕ್​ ತೆಗೆದ ಮಹಿಳೆಗೆ ಕಾದಿತ್ತು ಶಾಕ್​ 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

SSLC Students and Staff Hospitalized After Massive Bee Attack at Shikaripura School

Share This Article
1 Comment