ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳುವವರಿಗೆ ರಾಜ್ಯ ಸರ್ಕಾರದ ಸುತ್ತೋಲೆ! ವಿವರ ಇಲ್ಲಿದೆ

ಹಂಚಿಕೊಳ್ಳಿ
WhatsApp Facebook X Telegram

Shivamogga Feb 24, 2024   ಇದೇ  27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನವನ್ನ ಬೆಳಗ್ಗೆ 11 ಗಂಟೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ  ಈ ಸಂಬಂಧ ಇತ್ತೀಚೆಗೆ ಸುದ್ದಿಗೋಷ್ಟಿ ನಡೆಸಿದ  ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ  ಕಾರ್ಯಕ್ರಮದ ವಿವರ ನೀಡಿದ್ದರು.ಶಿವಮೊಗ್ಗ ಜಿಲ್ಲೆಯಿಂದ 100 ಬಸ್  ಮತ್ತು ಇತರೆ ವಾಹನಗಳಲ್ಲಿ ನೌಕರರು ಹೊರಡಲಿದ್ದಾರೆ. ಭಾಗವಹಿಸುವ ನೌಕರರಿಗೆ ಒಒಡಿ ಹಾಗೂ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ತಿಳಿಸಿದ್ದರು. ಈ ಬಗ್ಗೆ ಇದೀಗ ಸರ್ಕಾರದ ಸುತ್ತೋಲೆ ಹೊರಬಿದ್ದಿದೆ. 

ಸುತ್ತೋಲೆಯಲ್ಲಿ ಏನಿದೆ 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಅಧಿಕಾರಿ/ಸಿಬ್ಬಂದಿಗಳಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024 ರಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.

ಮುಂದುವರೆದು, ನಿಗಮ-ಮಂಡಳಿ, ನಗರ ಪಾಲಿಕೆಗಳು, ಪ್ರಾಧಿಕಾರಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024 ರಲ್ಲಿ ತಿಳಿಸಿರುವ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಆಯಾಯ ಸಂಸ್ಥೆಯು ತಮ್ಮ ಹಂತದಲ್ಲಿ ಪರಿಶೀಲಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳತಕ್ಕದ್ದು  ಎಂದು ತಿಳಿಸಲಾಗಿದೆ. 

ಸುತ್ತೋಲೆ

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor