ಮಲೆನಾಡಿಗರಿಗೆ ಗುಡ್ ನ್ಯೂಸ್ | ಬೇಲಿ, ದಾರಿ ಸಮಸ್ಯೆಗೆ ಹೊರಬಿತ್ತು ಸುತ್ತೋಲೆ?| ಹಾದಿ ಜಗಳ ಇತ್ಯರ್ಥಕ್ಕೆ ಸುತ್ತೋಲೆ? ಏನಿದು

The state government has issued a circular regarding the road leading to fields ರಾಜ್ಯಸರ್ಕಾರ ಹೊಲಗಳಿಗೆ ಹೋಗುವ ಹಾದಿ ವಿಚಾರಕ್ಕೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಿದೆ

ಮಲೆನಾಡಿಗರಿಗೆ ಗುಡ್ ನ್ಯೂಸ್ |  ಬೇಲಿ, ದಾರಿ ಸಮಸ್ಯೆಗೆ ಹೊರಬಿತ್ತು ಸುತ್ತೋಲೆ?|  ಹಾದಿ ಜಗಳ ಇತ್ಯರ್ಥಕ್ಕೆ ಸುತ್ತೋಲೆ? ಏನಿದು

KARNATAKA NEWS/ ONLINE / Malenadu today/ Oct 22, 2023 SHIVAMOGGA NEWS

ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಡೆಯುವ ಬೇಲಿಯ ಜಗಳಕ್ಕೆ ಸರ್ಕಾರ ಇತ್ಯರ್ಥ ಹಾಡುವ ಇರಾದೆಯಲ್ಲಿ ಬಹುಮುಖ್ಯ ಹೆಜ್ಜೆ ಇಟ್ಟಿದೆ. ಈ ಸಂಬಂಧ  ರಾಜ್ಯಸರ್ಕಾರ ಪ್ರಮುಖ ಸುತ್ತೋಲೆಯೊಂದನ್ನ ಹೊರಡಿಸಿದೆ. 

ಮಲೆನಾಡಿನಲ್ಲಿ ಈ ಬೇಲಿ ಸಮಸ್ಯೆ ತೀವ್ರವಾಗಿದೆ. ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ಹಾಗೂ ಹಳ್ಳಿಗಳನ್ನ ಹೆಚ್ಚಾಗಿ ಹೊಂದಿರುವ ಪೊಲೀಸ್ ಸ್ಟೇಷನ್​ಗಳಲ್ಲಿ ವರ್ಷಕ್ಕೆ 50 ಕೇಸ್​ಗಳು ಜಮೀನಿಗೆ ಇರುವ ದಾರಿಯನ್ನು ಮುಚ್ಚಲಾಗಿದೆ ಎಂಬ ವಿಚಾರಕ್ಕೆ ನಡೆಯುತ್ತದೆ. ಹೊಲಕ್ಕೆ ಹೋಗಲು ಬಿಡುತ್ತಿಲ್ಲ ಎಂದು ರೈತರ ನಡುವೆ ಜಗಳಗಳು ನಡೆಯುತ್ತವೆ. ಹಲವು ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆ ಹೊಲಕ್ಕೆ ಹೋಗುಲು ದಾರಿ ಬಿಡುತ್ತಿಲ್ಲ ಎಂದು ನಾಲ್ಕು ನಾಲ್ಕು ಹತ್ಯೆಗಳು ನಡೆದು ಹೋಗಿದ್ದವು. ಅದೇ ಮಾದರಿಯ ಜಗಳಗಳು ಇವತ್ತಿಗೂ ಹಳ್ಳಿಕಡೆಗಳಲ್ಲಿ ನಡೆಯುತ್ತವೆ. 

ಸಾಮಾನ್ಯವಾಗಿ ಕೊನೆಗಡಿಯಲ್ಲಿ ಇರುವ ರೈತರು ಮೊದಲು ಬೇಸಾಯ ಆರಂಭಿಸಬೇಕು ಕೊನೆಯದಾಗಿ ಕೃಷಿ ಚಟುವಟಿಕೆ ಮುಗಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಆದರೆ ಕೆಲವೊಂದು ಭೂಮಾಲೀಕರು ನಕಾಶೆಯಲ್ಲಿರುವ ಕಾಲು ದಾರಿಯನ್ನು ಮುಚ್ಚಿ ತಮ್ಮದೇ ಬೇಲಿ ಹಾಕಿಕೊಳ್ಳುತ್ತಾರೆ. ಅಂತಹ ಸನ್ನಿವೇಶದಲ್ಲಿ ಕೊನೆಯಲ್ಲಿರುವ ರೈತರು ತಮ್ಮ ಹೊಲಕ್ಕೆ ಹೋಗಲು ದಾರಿಯಿಲ್ಲದೆ ಪರದಾಡುತ್ತಾರೆ. ಇದು ಜಗಳಕ್ಕೆ ನಾಂದಿಯಾಗುತ್ತದೆ. ಇಂತಹ ಪ್ರಕರಣಗಳನ್ನು ಇತ್ಯರ್ಥ ಮಾಡಲು ಸರ್ಕಾರ ಮುಂದಾಗಿದೆ. 

ಅಲ್ಲದೆ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ಸುತ್ತೋಲೆ ಹೊರಡಿಸಿದ್ದು ಸಮಸ್ಯೆಗಳನ್ನು ಬಗೆಹರಿಸುವ ಅಧಿಕಾರ ಹಾಗೂ ಜವಾಬ್ದಾರಿಯನ್ನು ತಹಶೀಲ್ದಾರ್​ಗೆ ವಹಿಸಿದೆ. ಈ ಕ್ರಮ ಮಲೆನಾಡಲ್ಲಿ ಹಲವು ಜಗಳನ್ನು ಪರಿಹರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಸರ್ಕಾರ ಹೊರಡಿಸಿರುವ ಸುತ್ತೋಲೆ ಇಲ್ಲಿದೆ ಓದಿ . 



ಸುತ್ತೋಲೆ 

ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು 'ದಾರಿ' ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. 

ದಾರಿ' ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದಾಗೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವ್ಯಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಕಂಡುಬರುತ್ತದೆ. ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು

ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ 'ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.

The Indian Easement Act, 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು, ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು  ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು, ಕ್ರಮವಹಿಸಲು ಅವಕಾಶವಿದೆ. 

ಅಲ್ಲದೇ, ಈ ನಿಟ್ಟಿನಲ್ಲಿ Code of Criminal Procedure, 19730 eo 147 ರನ್ವಯ 'ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ' ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲ್ಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.

ಅದರಂತೆ, ತಾಲ್ಲೂಕಿನ ತಹಶೀಲ್ದಾರ್‌ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ನ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದ ಅಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ.





ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ