ಶಿವಮೊಗ್ಗದಲ್ಲಿ ಕನಕದಾಸರ ಗಾಯನ ಸ್ಪರ್ಧೆ: ಪ್ರಥಮ ಬಹುಮಾನ 50 ಸಾವಿರ, ಯಾರೆಲ್ಲಾ ಭಾಗವಹಿಸಬಹುದು?

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗದಲ್ಲಿ ಕನಕದಾಸರ ಗಾಯನ ಸ್ಪರ್ಧೆ
ಶಿವಮೊಗ್ಗದಲ್ಲಿ ಕನಕದಾಸರ ಗಾಯನ ಸ್ಪರ್ಧೆ

ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ಕನಕದಾಸರ ಕೃತಿಗಳ ಪರಿಚಯ, ಪ್ರಸಾರ ಹಾಗೂ ದಾಸ ಸಾಹಿತ್ಯದ ಮಹತ್ವವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯು ರಾಜ್ಯಮಟ್ಟದ ಗಾಯನ ಸ್ಪರ್ಧೆ ಆಯೋಜಿಸಿದೆ. ಸ್ಪರ್ಧೆಯ ಪ್ರತಿ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 50 ಸಾವಿರ ನೀಡಲಾಗುವುದು ಎಂದು ವಿದ್ವಾನ್ ಶೃಂಗೇರಿ ನಾಗರಾಜ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18ರಿಂದ 30 ವರ್ಷ ಹಾಗೂ 30 ವರ್ಷ ಮೇಲ್ಪಟ್ಟವರು ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿ ವಿಭಾಗದಲ್ಲಿ ದ್ವಿತೀಯ ಬಹುಮಾನವಾಗಿ 30 ಸಾವಿರ ಹಾಗೂ ತೃತೀಯ ಬಹುಮಾನವಾಗಿ 20 ಸಾವಿರ ನೀಡಲಾಗುವುದು ಎಂದರು.

ಭಾರತ್ ಜೋಡೋ ಯಾತ್ರೆ 2.0

ಪ್ರಥಮ ಸುತ್ತಿನ ವಿಡಿಯೊ ಸಲ್ಲಿಕೆಗೆ ನವೆಂಬರ್ 5 ಕೊನೆಯ ದಿನವಾಗಿದೆ. ಸ್ಪರ್ಧಿಗಳು ತಮ್ಮ ಗಾಯನದ ವಿಡಿಯೊವನ್ನು ಲಂಬ ಮಾದರಿಯಲ್ಲಿ ಚಿತ್ರೀಕರಿಸಿ 9148593553 ಸಂಖ್ಯೆಗೆ ವಾಟ್ಸ್‌ಆ್ಯಪ್ ಮೂಲಕ ಕಳುಹಿಸಬೇಕು. ವಿಡಿಯೊದೊಂದಿಗೆ ಹೆಸರು, ವಯಸ್ಸು, ಆಧಾರ್ ಪ್ರತಿ ಹಾಗೂ ಸಂಪರ್ಕ ವಿವರಗಳನ್ನು ಸಲ್ಲಿಸಬೇಕು ಎಂದರು.

ಇದು ರಾಜ್ಯ ಮಟ್ಟದ ಏಕಗಾಯನ ಸ್ಪರ್ಧೆಯಾಗಿದ್ದು, ಕನಕದಾಸರು ರಚಿಸಿರುವ ಹಾಗೂ ಅವರ ಅಂಕಿತನಾಮ ಹೊಂದಿರುವ ಒಂದು ಕೃತಿಯನ್ನು ಮಾತ್ರ ಹಾಡಬೇಕು. ಕರೋಕೆ ಮತ್ತು ವಾದ್ಯ ಸಂಗೀತ ಬಳಸುವಂತಿಲ್ಲ. ಅಗತ್ಯವಿದ್ದಲ್ಲಿ ಶ್ರುತಿ ಬಳಸಬಹುದು. ಹಾಡುವ ಮೊದಲು ಉಗಾಭೋಗ ಹಾಡುವಂತಿಲ್ಲ. ಮೊದಲ ಸುತ್ತಿನಲ್ಲಿ ಆಯ್ಕೆಯಾದವರು ಎರಡನೇ ಸುತ್ತಿನಲ್ಲಿ ಭಾಗವಹಿಸಲಿದ್ದು, ತಜ್ಞ ತೀರ್ಪುಗಾರರು ಮೌಲ್ಯಮಾಪನ ಮಾಡಲಿದ್ದಾರೆ ಎಂದು ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ ,ನವೆಂಬರ್ 29ರಂದು ಬೆಳಿಗ್ಗೆ 9.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಅಂತಿಮ ಸುತ್ತು ನಡೆಯಲಿದೆ. ಅಂದು ಸಂಜೆ 6ಕ್ಕೆ ರಂಗಮಂದಿರದ ಆವರಣದಲ್ಲಿ ಬಹುಮಾನ ವಿತರಣೆ ಹಾಗೂ ವಿಶೇಷ ಸಮೂಹ ಗಾಯನ ಕಾರ್ಯಕ್ರಮ ನಡೆಯಲಿದೆ. ಶಿವಮೊಗ್ಗ ನಗರದ 1,000ಕ್ಕೂ ಹೆಚ್ಚು ಮಂದಿ ಕನಕದಾಸರ ಕೃತಿಗಳನ್ನು ಸಾಮೂಹಿಕವಾಗಿ ಹಾಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿಯ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಆನಂದಪುರದ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮಿಗಳು, ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು, ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಹಾಗೂ ಶಿವಮೊಗ್ಗದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್. ಈಶ್ವರಪ್ಪ ವಹಿಸಲಿದ್ದು, ಸಂಸ್ಥೆಯ ಕೋಶಾಧ್ಯಕ್ಷ ಕಾಂತೇಶ್ ಈಶ್ವರಪ್ಪ ಉಪಸ್ಥಿತರಿರಲಿದ್ದಾರೆ. ಮಾಹಿತಿಗೆ ದೂರವಾಣಿ ಸಂಖ್ಯೆ: 91485 93553, 83108 76277, 98861 77311, 99008 55404 ಸಂಪರ್ಕಿಸಬಹುದು ಎಂದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor