ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ ಕೊಟ್ಟ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ

Shivamogga Feb 21, 2024   ಇದೇ  27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನವನ್ನ ಬೆಳಗ್ಗೆ 11 ಗಂಟೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ.ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರು ಈ ಸಮ್ಮೇಳನದಲ್ಲಿ   ಭಾಗವಹಿಸುವರು ಎಂದರು. ರಾಜ್ಯದ ವಿವಿಧೆಡೆಯಿಂದ ಬರುವ ಎರಡೂವರೆ ಲಕ್ಷಕ್ಕೂ ಹೆಚ್ಚುನೌಕರರು ಸಮಾವೇಶದಲ್ಲಿ  ಪಾಲ್ಗೊಳ್ಳಲಿದ್ದಾರೆ  ಎಂಧು ತಿಳಿಸಿದ್ರು. 

ಶಿವಮೊಗ್ಗ ಜಿಲ್ಲೆಯಿಂದ 100 ಬಸ್  ಮತ್ತು ಇತರೆ ವಾಹನಗಳಲ್ಲಿ ನೌಕರರು ಹೊರಡಲಿದ್ದಾರೆ. ಭಾಗವಹಿಸುವ ನೌಕರರಿಗೆ ಒಒಡಿ ಹಾಗೂ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮೋಹನ್ಕುಮಾರ್, ಡಿ.ಟಿ. ಕೃಷ್ಣಮೂರ್ತಿ, ನರಸಿಂಹಮೂರ್ತಿ, ಪ್ರಸನ್ನ ಆರ್. ಪಾಪಣ್ಣ ಮತ್ತಿತರರಿದ್ದರು.

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು