ಶಿವಮೊಗ್ಗ: ನಗರಲದಲ್ಲಿ ಗಾಂಜಾ ಹಾವಳಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಅದರಂತೆ ಗಸ್ತು ತಿರುಗುವ ಮೂಲಕ ಗಾಂಜಾ ವ್ಯಾಪಾರಿಗಳು ಹಾಗೆಯೇ ಅದನ್ನು ಕೊಳ್ಳುವವರ ಮೇಲೆ ಹದ್ದನ ಕಣ್ಣಿತ್ತು ಅಂತಹವರ ವಿರುದ್ದ ಸುಮೋಟೋ ಕೇಸ್ನ್ನು ದಾಖಲಿಸಿಕೊಳ್ಳುತ್ತಿದ್ದಾರೆ.
ಶಿವಮೊಗ್ಗ: ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ಬಾಲಕಿ
Student Arrested ಅದರಂತೆ ಶಿವಮೊಗ್ಗದ ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಪರೀಕ್ಷಿಸಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿನೋಬಾನಗರ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ರಾತ್ರಿ ಗಸ್ತು ನಡೆಸುತ್ತಿದ್ದಾಗ, ಸಾರ್ವಜನಿಕ ಸ್ಥಳವೊಂದರಲ್ಲಿ ಡಿಗ್ರಿ ಓದುತ್ತಿರುವ ಯುವಕನೊಬ್ಬ ಅಸ್ವಸ್ಥನಂತೆ ತೂರಾಡುತ್ತಿರುವುದು ಕಂಡುಬಂದಿದೆ. ಆತನ ವರ್ತನೆಯಲ್ಲಿ ವ್ಯತ್ಯಾಸ ಕಂಡುಬಂದ ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯುವಕ ಗಾಂಜಾ ಸೇವನೆ ಮಾಡಿರಬಹುದೆಂಬ ಅನುಮಾನದ ಮೇಲೆ ಆತನನ್ನು ತಕ್ಷಣವೇ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಆಸ್ಪತ್ರೆಯಿಂದ ಬಂದ ವೈದ್ಯಕೀಯ ವರದಿಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿನೋಬಾನಗರ ಪೊಲೀಸರು ಆತನ ವಿರುದ್ಧ ಮಾದಕ ವಸ್ತು ಸೇವನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Student Arrested in Shivamogga Ganja Case


