ನೇಣಿಗೆ ಶರಣಾದ ವಿದ್ಯಾರ್ಥಿನಿ, ಶುಗರ್ ಪ್ಯಾಕ್ಟರಿ ಸಮೀಪ ದಂಪತಿ ಶವ ಪತ್ತೆ!

ಹಂಚಿಕೊಳ್ಳಿ
WhatsApp Facebook X Telegram

SHIVAMOGGA  |  Jan 11, 2024  |   ವಿದ್ಯಾರ್ಥಿನಿ ನೇಣಿಗೆ ಶರಣು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂ ರಿಪ್ಪನ್​ಪೇಟೆ ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. 

ಕಳೆದ ಮಂಗಳವಾರ  ಘಟನೆ ನಡೆದಿದ್ದು, ಈಕೆ  ರಿಪ್ಪನ್‌ಪೇಟೆ ಪಟ್ಟಣದ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಳು. 

ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. 

ಈ ಸಂಬಂಧ  ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿ ರಿಪ್ಪನ್​ ಪೇಟೆ ಪೊಲೀಸ್ ಸ್ಟೇಷನ್​ ನಲ್ಲಿ ಪ್ರಕರಣ ದಾಖಲಿಸಿದೆ. 

ವೃದ್ಧ ದಂಪತಿ ಆತ್ಮಹತ್ಯೆ 

ಇನ್ನೊಂದೆಡೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ (shivamogga rural police station) ಲಿಮಿಟ್ಸ್​ನಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಪತ್ತೆಯಾಗಿದೆ. 

ಶುಗರ್​ ಪ್ಯಾಕ್ಟರಿ ಬಳಿ ಈ ಇಬ್ಬರ ಮೃತದೇಹ ನಿನ್ನೆ ರಾತ್ರಿ ಪತ್ತೆಯಾಗಿದೆ. ಇಬ್ಬರು ಸಹ ಮೃತಪಟ್ಟು ದಿನವಾಗಿರಬಹುದು ಎಂದು ಪೊಲೀಶ್ ಮೂಲಗಳು ತಿಳಿಸಿವೆ. 

ಇಬ್ಬರು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಯಿದ್ದು ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನೂ ಮೃತಪಟ್ಟವರು ಯಾರು? ಎಲ್ಲಿಯವರು ಎಂಬ ಗುರುತು ಸಹ ಪೊಲೀಸರಿಗೆ ತಿಳಿದುಬಂದಿಲ್ಲ. ಈ ಸಂಬಂಧ ಇನ್ನಷ್ಟೆ ವಿಚಾರಣೆ ನಡೆಯಬೇಕಿದೆ. 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor