ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲಾ ಮಕ್ಕಳು ಅಸ್ವಸ್ಥ! ಆಗಿದ್ದೇನು? ಸಿಇಒ ಹೇಮಂತ್ ಏನಂದ್ರು

Students Hospitalized in Shimoga and Bhadravati  | ಜಿಲ್ಲೆಯಲ್ಲಿ ಇವತ್ತು ಎರಡುಕಡೆಗಳಲ್ಲಿ ಶಾಲೆ ಮಕ್ಕಳು ಅಸ್ವಸ್ಥರಾದ ಘಟನೆ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ನಗರದಲ್ಲಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಕೆಮ್ಮಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇದಕ್ಕೂ ಮೊದಲು ಇವತ್ತು ಮಧ್ಯಾಹ್ನ ಭದ್ರಾವತಿಯಲ್ಲಿ ಮಕ್ಕಳು ಅಸ್ವಸ್ಥಗೊಂಡಿದ್ದರು. 

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆ 

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿರುವ ಡಾ. ಅಂಬೇಡ್ಕರ್‌ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರಲ್ಲಿ ಕೆಮ್ಮು ಕಾಣಿಸಿಕೊಂಡಿದೆ.  ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರಾಗುವುದನ್ನು ಗಮನಿಸಿದ ಶಾಲಾ ಸಿಬ್ಬಂದಿ, ಮಕ್ಕಳನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆತಂದಿದ್ದಾರೆ. 17 ಮಕ್ಕಳನ್ನು ಮೆಗ್ಗಾನ್‌ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

Students Hospitalized in Shimoga and Bhadravati
Students Hospitalized in Shimoga and Bhadravati

ಶಿವಮೊಗ್ಗ ಬೆಳ್ಳಿ ಬಂಗಾರ ಬಲು ಭಾರ! ಮತ್ತೆ ಏರಿದ ಬೆಲೆ! ಎಷ್ಟಿದೆ ನೋಡಿ ಚಿನ್ನ ಬೆಳ್ಳಿ ರೇಟು!

ಇನ್ನು ಈ ಬಗ್ಗೆ ವಿಷಯ ತಿಳಿದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮತ್ತು ಜಿಲ್ಲಾ ಪಂಚಾಯಿತಿ CEO ಹೇಮಂತ್‌ ಅವರು ಆಸ್ಪತ್ರೆಗೆ ದೌಡಾಯಿಸಿದರು. ವೈದ್ಯರು ಹಾಗೂ ಶಾಲೆಯ ಶಿಕ್ಷಕರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ  ಜಿ.ಪಂ ಸಿಇಒ ಹೇಮಂತ್‌, ಕೆಲವು ಮಕ್ಕಳಲ್ಲಿ ಕೆಮ್ಮು ಕಾಣಿಸಿಕೊಂಡಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದೆ. ರಿಪೋರ್ಟ್ ಬಂದ ತಕ್ಷಣ ಈ ಬಗ್ಗೆ ಮಾಹಿತಿ ಸಿಗುವುದು, ಎಲ್ಲಾ ವಿದ್ಯಾರ್ಥಿನಿಯರು ಚೇತರಿಸಿಕೊಂಡಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. 

Students Hospitalized in Shimoga and Bhadravati
Students Hospitalized in Shimoga and Bhadravati

ಭದ್ರಾವತಿಯಲ್ಲಿ ನಡೆದ ಘಟನೆ

ಭದ್ರಾವತಿ ತಾಲೂಕಿನ ಅರಳಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟದ ನಂತರ ಮಕ್ಕಳು ಅಸ್ವಸ್ಥಗೊಂಡಿರದ್ದರು. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ, ಸರ್ಕಾರದ ಆದೇಶದಂತೆ ರಕ್ತಹೀನತೆ ನಿವಾರಣೆಗಾಗಿ ಮಕ್ಕಳಿಗೆ ಎಫ್ ಎಕ್ಸ್ (FX) ಟಾನಿಕ್ ನೀಡಲಾಗಿತ್ತು . ಆನಂತರ ಮಕ್ಕಳಲ್ಲಿ ಅಸ್ವಸ್ಥತೆ ಕಾಣಿಸಿತ್ತು ಎಂದು ಸ್ತಳೀಯರು ಹೇಳುತ್ತಿದ್ದಾರೆ. ಇನ್ನೂ ಮಕ್ಕಳು ಅಸ್ವಸ್ಥಗೊಂಡ ಬೆನ್ನಲ್ಲೆ ಅವರನ್ನ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಟೊಮೆಟೊ ಚೀಪ್, ನುಗ್ಗೆಕಾಯಿ ಕಾಸ್ಟ್ಲಿ: ಶಿವಮೊಗ್ಗದಲ್ಲಿನ ತರಕಾರಿ, ಸೊಪ್ಪಿನ ರೇಟ್ ಎಷ್ಟಿದೆ ನೋಡಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲಾ ಮಕ್ಕಳು ಅಸ್ವಸ್ಥ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು Students Hospitalized in Shimoga and Bhadravati After Falling Ill