Unemployed Graduates / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಶಿವಮೊಗ್ಗ ವಾರ್ತಾ ಇಲಾಖೆ ಮೂಲಕ ಪ್ರಕಟಣೆಯನ್ನು ಸಹ ನೀಡಲಾಗಿದ್ದು, ಅದರ ವಿವರ ಹೀಗಿದೆ.
ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲೂಕು ಕಛೇರಿಯು ಈ ಸೌಲಭ್ಯವನ್ನು ಒದಗಿಸುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಠ ₹5.00 ಲಕ್ಷಗಳ ಸಹಾಯಧನ ಸಿಗಲಿದೆ.
ಪದವಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರು : 31-07-2026 ರೊಳಗೆ ಅರ್ಜಿ ಸಲ್ಲಿಸಬಹುದು.
ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ ತಾಲೂಕು ಕಛೇರಿಯಲ್ಲಿ ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಕಛೇರಿ ವೇಳೆಯಲ್ಲಿ ನೇರವಾಗಿ ಭೇಟಿ ನೀಡಿ ಅರ್ಜಿ ನಮೂನೆ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480843194 ಅನ್ನು ಸಂಪರ್ಕಿಸುವಂತೆ ಶಿವಮೊಗ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1), ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
