SHIMOGA NEWS LIVE

ಜಿ+7 ಮಾದರಿಯಲ್ಲಿ 1200 ಮನೆಗಳ ಅಪಾರ್ಟ್ಮೆಂಟ್! 5 ಕೋಟಿ ವೆಚ್ಚದಲ್ಲಿ ಸಿಟಿ ತುಂಬಾ ಸಿಸಿ ಕ್ಯಾಮರಾ! ಇನ್ನಷ್ಟಿದೆ ಸೂಡಾ ಪ್ಲಾನ್​

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

SUDA Announces / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಶಿವಮೊಗ್ಗ ಸಿಟಿಯನ್ನು ಇನ್ನಷ್ಟು ಸುಂದರವಾಗಿಸುವ ಪ್ಲಾನ್ ಮಾಡಿಕೊಂಡಿದೆ. ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸೂಡಾ ಅ‍ಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಜಿ+7 ಮಾದರಿಯಲ್ಲಿ 1200 ಮನೆಗಳ ಅಪಾರ್ಟ್ಮೆಂಟ್! 5 ಕೋಟಿ ವೆಚ್ಚದಲ್ಲಿ ಸಿಟಿ ತುಂಬಾ ಸಿಸಿ ಕ್ಯಾಮರಾ ಸೇರಿದಂತೆ ಸೂಡಾ ಪ್ಲಾನ್ಗಳನ್ನು ವಿವರಿಸಿರದರು.

ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಪ್ರಮುಖಾಂಶ

ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಮಾಹಿತಿ ನೀಡಿ ಮಾತನಾಡಿದ ಹೆಚ್.ಎಸ್.ಸುಂದರೇಶ್‌ ಮುಂದಿನ ಮೂರ್ನಾಲ್ಕು ದಶಕಗಳ ನಗರದ ಜನದಟ್ಟಣೆ, ಸಂಚಾರ, ಜನಸಂಖ್ಯಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಹಲವಾರು ಅಭಿವೃದ್ಧಿ ಹೊಂದಿದ ದೇಶಗಳ ಪ್ರಮುಖ ನಗರಗಳನ್ನು ಮಾದರಿಯಾಗಿಟ್ಟುಕೊಂಡು, ಮುಂದಿನ ದಿನಗಳಲ್ಲಿ ಶಿವಮೊಗ್ಗ-ಭದ್ರಾವತಿ ನಗರಗಳನ್ನು ಅಭಿವೃಧ್ಧಿಪಡಿಸಬಹುದಾದ ಸಾಧ್ಯತೆಗಳ ಕುರಿತು ಪರಿಣಿತರಿಂದ ಆಕರ್ಷಕ ವಿನ್ಯಾಸಗಳನ್ನು ತಯಾರಿಸಿ, ಸ್ಥಳೀಯ ಜನರಿಗೆ ಅನುಕೂಲವಾಗಬಹುದಾದ ವಿನ್ಯಾಸಗಳನ್ನು ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ. ಅವರು ತಿಳಿಸಿರುವ ಪ್ಲಾನ್ ಈ ರೀತಿಯಿದೆ.

  • ನಗರದ ಸೌಂದರ್ಯವನ್ನು ಹೆಚ್ಚಿಸುವ ಕಾರ್ಯಕ್ರಮದ ಭಾಗವಾಗಿ ಸೂಡಾದ (SUDA Announces) ವತಿಯಿಂದ ಆರಂಬಿಕವಾಗಿ 1ಕೋಟಿ ರೂ.ಗಳನ್ನು ಅರಣ್ಯ ಇಲಾಖೆಗೆ ನೀಡಲಿದೆ. ಅಲ್ಲದೇ ನಗರದ ಪ್ರಮುಖ ಸ್ಥಳಗಳನ್ನು ಗುರುತಿಸಿ, ಮೂರು ವರ್ಷಗಳ ಅವಧಿಗೆ ಗಿಡಗಳನ್ನು ನೆಟ್ಟು ಅವುಗಳನ್ನು ಬೆಳೆಸಲು ಒಡಂಬಡಿಕೆ ಮಾಡಿಕೊಳ್ಳಲಿದೆ. ಈ ಒಡಂಬಡಿಕೆ ಅನ್ವಯ ಅರಣ್ಯ ಇಲಾಖೆಯು ಗಿಡಗಳನ್ನು ನೆಟ್ಟು ಪೋಷಿಸಿ, ಪಾಲಿಕೆಗೆ ಹಸ್ತಾಂತರಿಸಲಿದೆ
  • ನಗರದೊಳಗಿನ ಹಲವು ಕೆರೆಗಳ ಅಭಿವೃದ್ಧಿಗೆ ಸೂಡಾ ಗಮನಹರಿಸಿದ್ದು, ಈಗಾಗಲೇ 15 ಕೆರೆಗಳನ್ನು ಗುರುತಿಸಲಾಗಿದ್ದು, ಹಲವು ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ, ಮಹಾನಗರಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಈ ಕೆರೆಗಳ ಒತ್ತುವರಿ ತೆರವುಗೊಳಿಸಿ, ಗಡಿ ಗುರುತಿಸಿ, ಪ್ರಾಧಿಕಾರಕ್ಕೆ ಹಸ್ತಾಂತರಿಸಿದಲ್ಲಿ ರಕ್ಷಣಾ ಬೇಲಿ ನಿರ್ಮಿಸುವುದರೊಂದಿಗೆ ಕೆರೆಗಳ ನವ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು
  • ನಗರದ ಪ್ರಮುಖ ವರ್ತುಲಗಳಲ್ಲಿ ಸ್ಕೈವಾಕ್‌, ಎಸ್ಕಲೇಟರ್‌ಗಳ ಅಳವಡಿಕೆಗೆ ಚಿಂತನೆ ನಡೆಸಲಾಗಿದೆ. ತಂತ್ರಜ್ಞರನ್ನು ಆಹ್ವಾನಿಸಿ, ಅವರ ಸೂಕ್ತ ಸಲಹೆ ಸಹಕಾರ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಸೂಡಾದಿಂದ 15ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ
  • ನಗರದ ವರ್ತುಲಗಳಲ್ಲಿ ಮಹಾನ್‌ ಆದರ್ಶವಾದಿಗಳ, ದೇಶೋದ್ದಾರಕರ ಪುತ್ಥಳಿಗಳನ್ನು ನಿರ್ಮಿಸಿ, ಸುತ್ತಲೂ ಹಸಿರಿನಿಂದ ಕಂಗೊಳಿಸುವಂತೆ ಮಾಡಲು ವರ್ತುಲಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಇರಬಹುದಾದ ಪರ್ಯಾಯ ಕ್ರಮಗಳ ಬಗ್ಗೆಯೂ ಚಿಂತನೆ ನಡೆಸಿದ್ದು, ಅದಕ್ಕಾಗಿ 08ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ.
  • ಜನನಿಬಿಡ ರಸ್ತೆಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲು ಸೂಕ್ತವಾದ ಸ್ಥಳಗಳನ್ನು ಗುರುತಿಸಿ ಕೊಡುವಂತೆ ಪೊಲೀಸ್‌ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದೆ. ಕ್ಯಾಮರಾಗಳ ಅಳವಡಿಕೆಗಾಗಿ 5.00ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ
  • ಪ್ರಾಧಿಕಾರದ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ ಸ್ಥಳದಲ್ಲಿ ಜಿ+7 ಮಾದರಿಯಲ್ಲಿ 1200ಮನೆಗಳ ವಸತಿ ಸಮುಚ್ಛಯ ನಿರ್ಮಾಣಗೊಳಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯ ನಂತರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಗೋಪಿಶೆಟ್ಟಿಕೊಪ್ಪದಲ್ಲಿ 104ಎಕರೆ ಭೂಮಿಯನ್ನು ರೈತರು ಹಸ್ತಾಂತರಿಸಲು ಆಸಕ್ತಿ ತೋರಿದ್ದರು. ಅದರಲ್ಲಿ 32ಎಕರೆ ಜಮೀನಿನ ಮಾಲೀಕರು. ಶೇ.50:50ಅನುಪಾತದಲ್ಲಿ ಅಭಿವೃದ್ಧಿಪಡಿಸಲು ಒಡಂಬಡಿಕೆ ಮಾಡಿಕೊಟ್ಟಿದ್ದಾರೆ. ಕೆಲವೇ ತಿಂಗಳುಗಳಲ್ಲಿ ಸದರಿ ಬಡಾವಣೆ ನಿರ್ಮಾಣ ಆರಂಭವಾಗಲಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಹಾನಗರಪಾಲಿಕೆ, ಕೃಷಿ, ಕಂದಾಯ, ಅರಣ್ಯ ಇಲಾಖೆ ಸೇರಿದಂತೆ ನಗರದ ಪ್ರಮುಖ ಇಲಾಖೆಗಳ ಜಿಲ್ಲಾ ಮಟ್ದದ ಹಿರಿಯ ಅಧಿಕಾರಿಗಳು, ಉದ್ಯಮಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಿ, ಅವರ ಅಮೂಲ್ಯ ಸಲಹೆ-ಸೂಚನೆ, ಅಭಿಪ್ರಾಯಗಳನ್ನು ಸಂಗ್ರಹಿಸಿರುವುದಾಗಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೂಡಾ ಆಯುಕ್ತ ಬಿ.ಆರ್.ಮಂಜುನಾಥ್‌, ಪ್ರವೀಣ್‌ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ