suddi today ಕುಡಿದ ಮತ್ತಿನಲ್ಲಿ ಕುತ್ತುಕೊಯ್ದುಕೊಂಡ ಆಸಾಮಿ ಸಾವು
suddi today ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ರಮೇಶ್ (40) ಎಂಬುವವರು ಕುಡಿತದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಿಲಿಟರಿ ಹೋಟೆಲ್ ನಡೆಸುತ್ತಿದ್ದ ರಮೇಶ್ ಅವರಿಗೆ ಕುಡಿತದ ಚಟವಿತ್ತು. ಕುಟುಂಬಸ್ಥರು ಚಟ ಬಿಡಿಸಲು ಸಾಕಷ್ಟು ಪ್ರಯತ್ನಿಸಿದ್ದರೂ ಫಲ ನೀಡಿರಲಿಲ್ಲ. ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ರಮೇಶ್, ನಿನ್ನೆ ರಾತ್ರಿ 8:20ಕ್ಕೆ ಹೋಟೆಲ್‌ನಲ್ಲಿದ್ದ ಚಾಕುವಿನಿಂದ ಶೌಚಾಲಯದಲ್ಲಿ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆನಂದಪುರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ 112 ಸಿಬ್ಬಂದಿ
ಶಿವಮೊಗ್ಗ: 2025ರ ಜೂನ್ 19ರಂದು ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಈ ಕುರಿತು ಸಾರ್ವಜನಿಕರೊಬ್ಬರು 112 ತುರ್ತು ಸೇವೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು, ಕರೆ ಸ್ವೀಕರಿಸಿದ ತಕ್ಷಣವೇ, ERV (Emergency Response Vehicle) ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿ ಅಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಟೋದ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟು ಪ್ರಥಮ ಚಿಕಿತ್ಸೆಗೆ ನೆರವಾಗಿದ್ದಾರೆ. ಅಲ್ಲದೆ, ಅಪಘಾತಕ್ಕೀಡಾದ ವ್ಯಕ್ತಿಯ ಕುಟುಂಬಸ್ಥರಿಗೆ ಮತ್ತು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ.
ತೀರ್ಥಹಳ್ಳಿಯಲ್ಲಿ ತಂದೆ-ಮಗನ ಜಗಳ: 112 ಸಿಬ್ಬಂದಿಯಿಂದ ಬುದ್ಧಿವಾದ
ಶಿವಮೊಗ್ಗ: ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಂದೆ ಮತ್ತು ಮಗ ಮದ್ಯಪಾನ ಮಾಡಿ ಗಲಾಟೆ ಮಾಡಿಕೊಳ್ಳುತ್ತಿರುವುದಾಗಿ 112 ತುರ್ತು ಸೇವೆಗೆ ಕರೆ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ತಂದೆ-ಮಗನ ನಡುವಿನ ಜಗಳವನ್ನು ನಿಲ್ಲಿಸಿದ್ದಾರೆ. ನಂತರ, ಇಬ್ಬರಿಗೂ ಮದ್ಯಪಾನ ಮಾಡದಂತೆ ಮತ್ತು ಯಾವುದೇ ಕಾರಣಕ್ಕೂ ಗಲಾಟೆ ಮಾಡಿಕೊಳ್ಳದಂತೆ ಸೂಕ್ತ ತಿಳುವಳಿಕೆ ಹಾಗೂ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಶಿವಮೊಗ್ಗ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ;
ಶಿವಮೊಗ್ಗ: ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಕೆಲಸ ಕೊಡಿಸುವುದಾಗಿ ಹೇಳಿ ತಮ್ಮಿಂದ ಹಣ ಪಡೆದು, ನಂತರ ಕೆಲಸವನ್ನೂ ಕೊಡಿಸದೆ, ಹಣವನ್ನೂ ವಾಪಸ್ ನೀಡದೆ ಮೋಸ ಮಾಡಿರುವುದಾಗಿ ಪೊಲೀಸರಿಗೆ ದೂರು ಹೇಳಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣದ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.
ಆನಂದಪುರ ಬಳಿ ರಸ್ತೆಗೆ ಅಡ್ಡಲಾದ ಮರ ತೆರವು: ಸುಗಮ ಸಂಚಾರಕ್ಕೆ ಅನುವು
ಶಿವಮೊಗ್ಗ: ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಸ್ಪಾಡಿ ಬಳಿ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಕುರಿತು ವಿಷಯ ತಿಳಿದು ಸ್ಥಳಕ್ಕೆ ತೆರಳಿದ್ದ ERV (Emergency Response Vehicle) ಸಿಬ್ಬಂದಿಗಳು ಗ್ರಾಮಸ್ಥರ ನೆರವಿನೊಂದಿಗೆ ರಸ್ತೆಯ ಮೇಲಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು
