suhas shetty murder case : ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ | 3 ಆರೋಪಿಗಳು ಬಂಧನ

prathapa thirthahalli
Prathapa thirthahalli - content producer

suhas shetty murder case : ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ | 3 ಆರೋಪಿಗಳು ಬಂಧನ

suhas shetty murder case : ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ.

ಅಜರುದ್ದೀನ್ ಯಾನೆ ಅಜ್ಜು (29), ಅಬ್ದುಲ್ ಖಾದರ್ ಯಾನೆ ನೌಫಲ್‌ (24) ಹಾಗೂ ನೌಷಾದ್‌ ಯಾನೆ ಚೊಟ್ಟೆ ನೌಷಾದ್ (39) ಬಂಧಿತರು.

ಮೇ 01 ರಂದು ಮಂಗಳೂರಿನ ಕಿನ್ನಿಪದವು ಬಳಿ ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಹಿನ್ನಲೆ ಆರೋಪಿಗಳ ಪತ್ತೆಗಾಗಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಪೈಕಿ ಅಜರುದ್ದೀನ್ ಎಂಬ ಆರೋಹಿಯ  ಮೇಲೆ ಈ ಹಿಂದೆ  ಪಣಂಬೂರು, ಸುರತ್ಕಲ್ ಮತ್ತು ಮುಲ್ಕಿ ರಾಣೆಗಳಲ್ಲಿ 3 ಕಳವು ಪ್ರಕರಣಗಳು ದಾಖಲಾಗಿವೆ. ಈತ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡುತ್ತಿದ್ದ. ಅಬ್ದುಲ್ ಖಾದರ್ ಆರೋಪಿಗಳಿಗೆ ಕಾರಿನಲ್ಲಿ ಪರಾರಿಯಾಗಲು ಸಹಕರಿಸಿದ್ದ. ನೌಷಾದ್ ಕೊಲೆಗೆ ಸಂಚು ರೂಪಿಸಲು ನೆರವಾಗಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಅಜರುದ್ದೀನ್ ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.ಹಾಗೆಯೇ ಅಬ್ದುಲ್ ಖಾದರ್ ಮತ್ತು ಚೊಟ್ಟೆ ನೌಷದ್ ರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ

Share This Article