ಶಿವಮೊಗ್ಗ : ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ಸಮೀಪ ಹಾದುಹೋಗುವ ರೈಲ್ವೇ ಹಳಿಯ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಚಿತ್ರಮಂದಿರಗಳಲ್ಲಿ 2 ನೇ ವಾರಕ್ಕೆ ಕಾಲಿಟ್ಟ ಪಾಠಶಾಲಾ ಚಿತ್ರ : ನಿರ್ದೇಶಕ ಹೆದ್ದೂರು ಮಂಜುನಾಥ್ ಶೆಟ್ಟಿ ಏನಂದ್ರು.. ?
ಮೃತರನ್ನು ನಗರದ ಆಯುರ್ವೇದಿಕ್ ಕಾಲೇಜಿನ ಸಿಬ್ಬಂದಿಯಾಗಿದ್ದ ಈಶ್ವರ್ ಎಂದು ಗುರುತಿಸಲಾಗಿದೆ. ಈಶ್ವರ್ ಅವರು ಮೆಗ್ಗಾನ್ ಆಸ್ಪತ್ರೆಯಲ್ಲೂ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮೃತ ಈಶ್ವರ್ ಇತ್ತೀಚೆಗಷ್ಟೇ ವಿವಾಹವಾಗಿದ್ದರು. ಈಶ್ವರ್ ಅವರ ಸಾವಿಗೆ ನಿಖರವಾದ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.
ಮೃತದೇಹ ಪತ್ತೆಯಾದ ಸ್ಥಳದ ಸ್ಥಿತಿಯನ್ನು ಗಮನಿಸಿದಾಗ, ಈಶ್ವರ್ ಅವರು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಹೆಚ್ಚು ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ರೈಲ್ವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
Suicide Body Found on Shivamogga Railway Track


