ಗ್ರಂಥಾಲಯದಿಂದ ವಾಪಸ್ ಬರುತ್ತಿದ್ದ ಯುವತಿಯ ಮೇಲೆ ಗುಂಡು ಹಾರಿಸಿದ ವ್ಯಕ್ತಿ : ದೃಶ್ಯ ಸಿಸಿ ಟಿವಿಯಲ್ಲಿ ಸೆರೆ
Girl Shot at Near Home ಫರಿದಾಬಾದ್ (ಹರಿಯಾಣ): ನಗರದಲ್ಲಿ ಗ್ರಂಥಾಲಯದಿಂದ ಮನೆಗೆ ಮರಳುತ್ತಿದ್ದ ಯುವತಿಯೊಬ್ಬಳಿಗೆ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ. ಆತ ಗುಂಡು ಹಾರಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಈ ಘಟನೆ ನಿನ್ನೆ ಸೋಮವಾರ ಸಂಜೆ ಸುಮಾರು 5.30 ಗಂಟೆಗೆ ಯುವತಿಯ ಮನೆಯ ಸಮೀಪದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಗಾಯಗೊಂಡ ಯುವತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸದ್ದಾರೆ. ಘಟನೆಯ ಕುರಿತು … Read more